ಶಿವನಗೌಡ ಬೆಂಬಲಿಗರ ಸೋಲಿಸೋದೇ ಗುರಿ
ಕನ್ನಡಪ್ರಭ ವಾರ್ತೆ,ದೇವದುರ್ಗ,ಏ.10
ಶಾಸಕ ಶಿವನಗೌಡ ನಾಯಕ ಹಾಗೂ ಅವರ ಬೆಂಬಲದಿಂದ ಸ್ಪರ್ಧಿಸಿರುವ ರಾಯಚೂರು ನಗರ ಮತ್ತು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಗಳನ್ನು ಸೋಲಿಸುವುದೇ ತಮ್ಮ ಗುರಿ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಎ. ಪಾಪಾರೆಡ್ಡಿ ಹೇಳಿದರು.
ತಾಲೂಕಿನ ಅರಕೇರಾ ಗ್ರಾಮದಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿಹಾಗೂ ಮಾಜಿ ಸಂಸದ ಎ.ವೆಂಕಟೇಶ ನಾಯಕ ಅವರೊಂದಿಗೆ ಕಾಂಗ್ರೆಸ್ ಸೇರ್ಪಡೆ ಸಂಬಂಧಿ ಚರ್ಚೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 19 ವರ್ಷದಿಂದ ಬಿಜೆಪಿ ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದಿದ್ದು, ತಮಗೆ ಟಿಕೆಟ್ ನಿರಾಕರಿಸಲಾಯಿತು. ಅದಕ್ಕೆ ಶಾಸಕ ಶಿವನಗೌಡ ನಾಯಕ ಅವರ ಕೈವಾಡವೇ ಕಾರಣ ಎಂದು ಆರೋಪಿಸಿದರು.
ಯುಗಾದಿ ಬಳಿಕ ಕಾಂಗ್ರೆಸ್ ಸೇರ್ಪಡೆ: ರಾಯಚೂರು ನಗರ ಸೇರಿ ಜಿಲ್ಲೆಯಲ್ಲಿ ಬಿಜೆಪಿ ಬಲವರ್ಧನೆಗೆ ಶ್ರಮಿಸಿದ್ದಾಗಿ ತಿಳಿಸಿದ ಅವರು, ಬಿಜೆಪಿ ಸಂಸದ ಅನಂತಕುಮಾರ್ ಮತ್ತು ಶಿವನಗೌಡ ನಾಯಕ ಸೇರಿ ಟಿಕೆಟ್ ಕೈ ತಪ್ಪುವಂತೆ ಮಾಡಿದ್ದಾರೆ. ಇದರಿಂದ ತಮಗೆ ಬಹಳ ನೋವಾಗಿದೆ. ಈ ಕಾರಣಕ್ಕಾಗಿ ಯುಗಾದಿ ಹಬ್ಬದ ನಂತರ ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ತಿಳಿಸಿದರು.
ಕಾಂಗ್ರೆಸ್ಗೆ ಅನುಕೂಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಸಂತ ಕುಮಾರ ಮಾತನಾಡಿ, ಬೇರೆ ಬೇರೆ ಪಕ್ಷದಲ್ಲಿದ್ದರೂ ಮಾನಸಿಕವಾಗಿ ಒಂದಾಗಿದ್ದೆವು ಎಂದು ಹೇಳಿ, ಪಾಪಾರೆಡ್ಡಿ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಎ. ವೆಂಕಟೇಶ ನಾಯಕ. ಜಿ.ಪಂ ಉಪಾಧ್ಯಕ್ಷ ಕೆ. ಶರಣಪ್ಪ, ಕಾಂಗ್ರೆಸ್ ಮುಖಂಡ ಪಾರಸ್ಮಲ್ ಸುಖಾಣಿ, ಬಸವರಾಜ ರೆಡ್ಡಿ, ಬುಡ್ಡನಗೌಡ ಪಾಟೀಲ್, ಯುವ ಮುಖಂಡ ಸಾಜೀದ್ ಚಿಂಚೋಳಿಕರ್, ಚನ್ನಯ್ಯ ಸ್ವಾಮಿ ಅರಕೇರಾ, ಲಕ್ಷ್ಮಣ ಜ್ಯೋತಿ, ಸುಲ್ತಾನ್ ಬಾಬಾ ಕೊಪ್ಪರ್ ಸೇರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

