ರಾಯಚೂರು

ಚುನಾವಣೆ ನೀತಿ ಸಂಹಿತೆ;ಅಧಿಕಾರಿಗಳ ಸಭೆ

Published On :

ರಾಯಚೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ನಗದು ಸೂಕ್ತ ದಾಖಲೆಗಳಿಲ್ಲದೇ ಸಾಗಣೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಸಹಾಯಕ ಆಯುಕ್ತೆ ಮಂಜುಶ್ರೀ ತಿಳಿಸಿದರು. ಅವರು ಈ ಕುರಿತು ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರೂ ದೂರುಗಳನ್ನು ದಾಖಲಿಸ ಬಹುದಾಗಿದೆ. ಚುನಾವಣಾ ಕಂಟ್ರೋಲ್ ರೂಂ. 08532-226363, ಪೊಲೀಸ್ ಕಂಟ್ರೋಲ್ ರೂಂ. 08532 235635, ಅಬಕಾರಿ  ಕಂಟ್ರೋಲ್ ರೂಂ. 08532 221243, ಜಿಲ್ಲಾಧಿಕಾರಿಗಳ ಕಚೇರಿ- 08532 229011 ಮತ್ತು 9591820009 ಇಲ್ಲಿಗೆ ಸಂಪರ್ಕಿಸಲು ಅವರು ತಿಳಿಸಿದರು.
ನೀತಿ ಸಂಹಿತೆ ಉಲ್ಲಂಘನೆ ವರದಿಗಳನ್ನು ಪ್ರತಿದಿನ ತಪ್ಪದೇ ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳು ಕಳುಹಿಸಬೇಕು. ಸಾರ್ವಜನಿಕ ಹಾಗೂ ಖಾಸಗಿ ಗೋಡೆಬರಹ ಹಾಗೂ ಭಿತ್ತಿ ಪತ್ರಗಳನ್ನು ಅಂಟಿಸುವಂತಿಲ್ಲ ಎಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಜ್ಞಾನಪ್ರಕಾಶ, ಡಿವೈಎಸ್ಪಿ ದಿವ್ಯಾ ಗೋಪಿನಾಥ, ಹೆಚ್ಚುವರಿ ಎಸ್ಪಿ ಮಹಾಂತೇಶ್, ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಕೇಂದ್ರ ಸ್ಥಾನ ಬಿಡದಿರಲು ಸೂಚನೆ

ರಾಯಚೂರು: ವಿಧಾನಸಭೆ ಚುನಾವಣೆಗಳು ಮೇ 5ರಂದು ಜಿಲ್ಲೆಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಡಿಡಿಪಿಯು ಸೂಚಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಡಿಡಿಪಿಯು ಕೆ.ಶರಣಪ್ಪ, ಬೇಸಿಗೆ ರಜೆಗಳು ಇದ್ದರೂ ಚುನಾವಣೆ ನಡೆಯುವ ಪ್ರಯುಕ್ತ ಚುನಾವಣಾಧಿಕಾರಿಗಳ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಅವರು ತಿಳಿಸಿದ್ದಾರೆ.

ರಾಯಚೂರು: 1 ನಾಮಪತ್ರ ಸಲ್ಲಿಕೆ
ರಾಯಚೂರು:
ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬುಧವಾರ ನಾಮಪತ್ರ ಸಲ್ಲಿಕೆಯ ಮೊದಲ ದಿನ ಒಬ್ಬರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಎಸ್‌ಯುಸಿಐ ವತಿಯಿಂದ ಅಭ್ಯರ್ಥಿಯಾಗಿ ಅಪರ್ಣಾ ಬಿ.ಆರ್. ಅವರು ರಾಯಚೂರು ನಗರ ವಿಧಾನಸಭೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಉಳಿದಂತೆ ಜಿಲ್ಲೆಯ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣೆ ವಿಭಾಗ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.