ರಾಯಚೂರು

ಹಣ ಸಾಗಣೆಗೆ ನಿರ್ಬಂಧ

Published On :

ರಾಯಚೂರು: ಚುನಾವಣಾ ಆಯೋಗದ ನಿರ್ದೇಶನದನ್ವಯ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವ್ಯವಹಾರ ಹೊರತುಪಡಿಸಿ ಸಾರ್ವಜನಿಕರು ಅನಧಿಕೃತವಾಗಿ 50 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಅನಧಿಕೃತವಾಗಿ ಸಾಗಣೆ ಮಾಡದಂತೆ ಜಿಲ್ಲಾಡಳಿತ ಸೂಚಿಸಿದೆ.
ಅಧಿಕೃತ ದಾಖಲೆಗಳಿಲ್ಲದೇ 50 ಸಾವಿರ ಮತ್ತು ಅದಕ್ಕಿಂತ ಹೆಚ್ಚಿನ ಹಣವನ್ನು ಸಾಗಿಸುತ್ತಿದ್ದರೆ ಚುನಾವಣಾ ಮಾದರಿ ನೀತಿ ಸಂಹಿತೆಯನ್ವಯ ಸದರಿ ಹಣವನ್ನು ವಶಪಡಿಸಿಕೊಂಡು ಚುನಾವಣಾ ನಿಯಮಾವಳಿಯಂತೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು ಮೇಲೆ ತಿಳಿಸಿದ ಮೊತ್ತಕ್ಕಿಂತ ಅಧಿಕ ಹಣ ಸಾಗಿಸುವಾಗ ನಿರ್ದಿಷ್ಟ ಪಡಿಸಿದ ಮಾದರಿ ಕ್ರಮಗಳಂತೆ ಹಣ ಸಾಗಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚಿಸಿದ್ದಾರೆ.
ಮದ್ಯ ಸಂಗ್ರಹ ವಶ
ರಾಯಚೂರು: ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ವಿವಿಧೆಡೆ ಪೊಲೀಸರು ದಾಳಿ ಮಾಡಿ ಚುನಾವಣೆಯ ಹಿನ್ನೆಲೆ ಸಾಗಿಸಲಾಗುತ್ತಿದ್ದ ಅಕ್ರಮ ಮದ್ಯವನ್ನು ಜಪ್ತಿ ಮಾಡಿದ್ದಾರೆ.
ನಗರದ ದೇವಿ ನಗರದಲ್ಲಿ ದಾಳಿ ಮಾಡಿದ ನೇತಾಜಿ ನಗರ ಪೊಲೀಸರು 10 ಸಾವಿರ ಬೆಲೆಯ ಮದ್ಯವನ್ನು ಜಪ್ತಿ ಮಾಡಿ ಶೇಕ್ಷಾವಲಿ ಎಂಬಾತನನ್ನು ಬಂಧಿಸಿದ್ದಾರೆ. ಈತನ ಮನೆಯಲ್ಲಿ 2 ಬಾಕ್ಸ್‌ಗಳಲ್ಲಿ ಅಕ್ರಮವಾಗಿ ಮದ್ಯವನ್ನು ಸಂಗ್ರಹಿಸಿಡಲಾಗಿತ್ತು.
ಅದೇ ರೀತಿ ಲಿಂಗಸ್ಗೂರು ತಾಲೂಕಿನ ಮಸ್ಕಿ ಬಳಿ ಜೀಪಿನಲ್ಲಿ ಸಾಗಿಸುತ್ತಿದ್ದ 50 ಸಾವಿರ ಬೆಲೆಯ ಮದ್ಯ ಜಪ್ತಿ ಮಾಡಿದ್ದು, ಅಮರೇಶ್ ಎಂಬಾತನನ್ನು ಬಂಧಿಸಿ ಜೀಪ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಕುರಿತು ನೇತಾಜಿ ನಗರ ಮತ್ತು ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.