ನಾಳೆ ಅಂಬೇಡ್ಕರ್ ಜಯಂತಿ ಆಚರಣೆ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ. 14ರಂದು ನಗರದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ರಂಗಮಂದಿರದಲ್ಲಿ ಬೆಳಗ್ಗೆ 10ಕ್ಕೆ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಉದ್ಘಾಟಿಸಲಿದ್ದಾರೆ. ಜಿಪಂ ಸಿಇಒ ಜ್ಞಾನಪ್ರಕಾಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಎಸ್ಪಿ ಎಸ್.ಬಿ. ಬಿಸನಳ್ಳಿ, ಸಹಾಯಕ ಆಯುಕ್ತೆ ಮಂಜುಶ್ರೀ, ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ, ಜಿಪಂ ಉಪಕಾರ್ಯದರ್ಶಿ ಎಂ.ಡಿ. ಯುಸೂಫ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಡಾ. ಶ್ರೀಮಂತ ಹೋಲಕರ್ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 9ಕ್ಕೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಡಾ. ಅಂಬೇಡ್ಕರರ ಪುತ್ಥಳಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಬೆಳಗ್ಗೆ 10ಕ್ಕೆ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮೇ 7ರಂದು ವ್ಯಕ್ತಿತ್ವ
ವಿಕಸನ ಶಿಬಿರ
ಮಸ್ಕಿ: ಮೈಸೂರಿನ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯ ವತಿಯಿಂದ ಮೇ 7ರಿಂದ 11ರವರೆಗೆ ಸಾರ್ವಜನಿಕರಿಗಾಗಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ತಮಿಳುನಾಡಿನ ಊಟಿಯಲ್ಲಿ ಏರ್ಪಡಿಸಲಾಗಿದೆ. ಜಗದ್ಗುರು ಶಿವರಾತ್ರಿ ದೇಶೀ ಕೇಂದ್ರ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನಡೆಯುವ ಈ ಶಿಬಿರದಲ್ಲಿ ಪ್ರತಿನಿತ್ಯ ಸಿದ್ದೇಶ್ವರ ಸ್ವಾಮಿಗಳ ಪ್ರವಚನವಿರುತ್ತದೆ. ಆಸಕ್ತ ಶಿಬಿರಾರ್ಥಿಗಳು ಪ್ರಕಟಣಾ ವಿಭಾಗ ಜೆಎಸ್ಎಸ್ ಮಹಾವಿದ್ಯಾಪೀಠ, ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು ಇದರ ಸಂಚಾಲಕ ಎಸ್.ಪುಟ್ಟರಾಜಪ್ಪ ಮೊ. 9741033336 ಮತ್ತು ಬಿ.ನಿರಂಜನ ಮೂರ್ತಿ ಮೊ. 9986045607 ಅವರನ್ನು ಸಂಪರ್ಕಿಸಲು ಕೋರಲಾಗಿದೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

