ಬಸಮ್ಮಗೆ ಕರ್ನಾಟಕ ಐಸಿರಿ ಪ್ರಶಸ್ತಿ
ಮುದಗಲ್: ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮುಖಂಡೆ ಬಸಮ್ಮ ಮುದಗಲ್ ಇವರಿಗೆ ಉತ್ತಮ ಸಮಾಜ ಸೇವೆಗಾಗಿ 'ಕರ್ನಾಟಕ ಐಸಿರಿ' ಪ್ರಶಸ್ತಿ ಲಭಿಸಿದೆ.
ಕನ್ನಡ ತಮಿಳ ಸೌಹಾರ್ದ ಸಂಘಟನೆ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ದಲಿತ ಪತ್ರಕರ್ತರ ವೇದಿಕೆಯವರು 3ನೇ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಉತ್ತಮ ಸಮಾಜ ಸೇವೆಗಾಗಿ ಕರ್ನಾಟಕ ಐಸಿರಿ ಪ್ರಶಸ್ತಿಯನ್ನು ನೀಡಿದ್ದಾರೆ.
--
ಅಕ್ರಮ ಮದ್ಯ ಜಪ್ತಿ
ರಾಯಚೂರು: ಲಿಂಗಸ್ಗೂರು ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಅಕ್ರಮ ಮದ್ಯದ ಸಂಗ್ರಹಣೆ ಮೇಲೆ ದಾಳಿ ಮಾಡಿದ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಹುಸೇನಪ್ಪ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಚುನಾವಣೆಯ ಹಿನ್ನೆಲೆ ಮಾರಾಟ ಮಾಡಲು ಮದ್ಯ ಸಂಗ್ರಹಿಸಿಟ್ಟಿದ್ದು ಪೊಲೀಸರು ದಾಳಿ ಮಾಡಿ, ಆರೋಪಿಯಿಂದ 1,418 ಮದ್ಯ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಯಚೂರು: ಸಿಂಧನೂರು ತಾಲೂಕಿನ ಎಲೆಕೂಡ್ಲಗಿ ಗ್ರಾಮದ ಹಳ್ಳದ ಬಳಿ ಕೋಳಿ ಜೂಜು ಪಂದ್ಯದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಪೊಲೀಸರು ನಗದು ಮತ್ತು ಜೂಜಿಗೆ ಬಳಕೆಯಾಗುತ್ತಿದ್ದ ಹುಂಜಗಳನ್ನು ಜಪ್ತಿ ಮಾಡಿದ್ದಾರೆ. ಗ್ರಾಮದ ಹಳ್ಳದ ಬಳಿ ಜೂಜಾಡುತ್ತಿದ್ದವರ ಮೇಲೆ ದಾಳಿ ಮಾಡಿದಾಗ ಆರೋಪಿಗಳು ಪರಾರಿಯಾಗಿದ್ದು, 2 ಹುಂಜ ಮತ್ತು ನಗದು 1,750 ಜಪ್ತಿ ಮಾಡಿದ್ದಾರೆ. ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

