'ಕೈ ಮೋಸಕ್ಕೆ ಮನನೊಂದು ಬಿಜೆಪಿ ಸೇರ್ಪಡೆ'
ಕನ್ನಡಪ್ರಭ ವಾರ್ತೆ , ಲಿಂಗಸ್ಗೂರು , ಏ.13
ಕಾಂಗ್ರೆಸ್ ಪಕ್ಷದ ಕೆಲ ಹಿರಿಯರು ನನಗೆ ಮಾಡಿದ ಮೋಸದಿಂದ ಮನನೊಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಬಿಜೆಪಿ ಅಭ್ಯರ್ಥಿ ಟಿ.ಆರ್. ನಾಯಕ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ಸಂಜೆ ಬಿಜೆಪಿ ಪಕ್ಷದ ನೂತನ ಕಾರ್ಯಾಲಯ ಉದ್ಘಾಟಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಲ್ಲಿದ್ದ ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸುವ ಭರಸವೆ ನೀಡಿ ಪಕ್ಷಕ್ಕೆ ಕರೆತಂದು ಕೊನೆ ಗಳಿಗೆಯಲ್ಲಿ ಟಿಕೆಟ್ನಿಂದ ವಂಚಿತಗೊಂಡರೂ ಕಳೆದ 5 ವರ್ಷದಿಂದ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ.
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ನನಗೆ ಪುನಃ ವಂಚಿಸಲಾಯಿತು. ಇದರಿಂದ ಮನನೊಂದು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಈ ಬಾರಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ದೊರೆತಿದ್ದು, ಜನತೆ ಆಶೀರ್ವದಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಪಕ್ಷದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ರಮೇಶ ಜೋಷಿ, ಡಾ. ಗುರುರಾಜ ದೇಶಪಾಂಡೆ, ಮುಖಂಡರಾದ ಜೀವಲೆಪ್ಪ ನಾಯಕ, ಟಿ.ಎಲ್. ನಾಯಕ, ಶಶಿಕಾಂತ ಗಸ್ತಿ, ಹನುಮೇಶ ಸರಾಫ್, ದೇವಪ್ಪ ರಾಠೋಡ, ಕುಶವಂತ ಯಾದವ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

