ದಲಿತ ಪ್ಯಾಂಥರ್ಸ್ ಕಾಂಗ್ರೆಸ್ಗೆ ಬೆಂಬಲ
ರಾಯಚೂರು: ಪ್ರಸಕ್ತ ಚುನಾವಣೆಯಲ್ಲಿ ಭಾರತೀಯ ದಲಿತ ಪ್ಯಾಂಥರ್ಸ್ ಜಿಲ್ಲೆಯ ಎಲ್ಲ 7 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ ಹೇಳಿದರು.
ನಗರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಛಲವಾದಿ ಸಮಾಜದ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಮತದಾರರಿದ್ದಾರೆ. ಪ್ರತಿ ಕ್ಷೇತ್ರದಲ್ಲಿಯೂ 16 ಸಾವಿರ ಛಲವಾದಿ ಸಮಾಜದವರಿದ್ದಾರೆ. ಇದುವರೆಗೆ ವಿವಿಧ ಪಕ್ಷಗಳು ಮತಬ್ಯಾಂಕ್ ಆಗಿ ಬಳಕೆ ಮಾಡಿ ನಂತರ ನಿರ್ಲಕ್ಷಿಸಿವೆ ಎಂದು ಟೀಕಿಸಿದರು.
ಛಲವಾದಿ ಸಮಾಜಕ್ಕೆ ರಾಜಕೀಯ ಕ್ಷೇತ್ರದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಲ್ಲಿ ಎಲ್ಲ ಪಕ್ಷಗಳು ಅಸಡ್ಡೆ ತೋರಿವೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜಕೀಯ ಕ್ಷೇತ್ರದಲ್ಲಿ ಆದ್ಯತೆ ಸೇರಿದಂತೆ ವಿವಿಧ ಬೇಡಿಕೆಗಳೊಂದಿಗೆ ಬೆಂಬಲಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮುಂದಿನ ದಿನಗಳಲ್ಲಿ ಛಲವಾದಿ ಸಮಾಜದವರಿಗೆ ವಿವಿಧ ನಿಗಮ ಮಂಡಳಿಗಳಿಗೆ ನೇಮಕ, ಆಶ್ರಯ ಸಮಿತಿಯಲ್ಲಿ ನೇಮಕ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಿಸುವಂತೆ ಒತ್ತಾಯಿ ಸಲಾಗುತ್ತದೆ. ಅದೇ ಭರವಸೆಯೊಂದಿಗೆ ಕಾಂಗ್ರೆಸ್ಗೆ ಬೆಂಬಲಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

