'ಮಹಾ' ಮಂತ್ರಿ ಹೇಳಿಕೆಗೆ ಖಂಡನೆ
ಸಿಂಧನೂರು: ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್.ಪಾಟೀಲ್ ಪ್ರಚೋದನಾಕಾರಿ ಹೇಳಿಕೆಯನ್ನು ಖಂಡಿಸಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆಗ ಖಾಸಗಿ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್. ಪಾಟೀಲ್ ಅವರು ಎಂಇಎಸ್ನ ಐದು ಶಾಸಕರನ್ನು ಆರಿಸಿ ತಂದಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿ ಕನ್ನಡಗಿರನ್ನು ಪರೋಕ್ಷವಾಗಿ ಕೆಣಕಿದ್ದಾರೆ.
ಇಂತಹ ಎಂಇಎಸ್ ಸಂಘಟನೆ ನಿಷೇಧಿಸಿ ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಜರುಗಿಸಬೇಕು. ಮತ್ತೊಮ್ಮೆ ಕಾಲು ಕೆದರಿ ಕನ್ನಡಿಗರನ್ನು ಕೆಣಕಿದರೆ ಮುಂದಿನ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ಸಮಿತಿ ಮನವಿಯಲ್ಲಿ ಎಚ್ಚರಿಸಿದೆ.
ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ರಾಜ್ಯ ಸಂಚಾಲಕ ಕೆ.ಬಾಳಪ್ಪ, ತಹಸೀಲ್ದಾರ್ ಕಚೇರಿ ಶಿರಸ್ತೇದಾರರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಉಪಾಧ್ಯಕ್ಷ ಎಂ.ಹರೀಶ, ಹಸನ ಟೇಲರ್, ಸಲೀಂ ಜವಳಗೇರಾ, ಮುರ್ತುಜಾ, ಅವಿನಾಶ ದೇಶಪಾಂಡೆ, ಸಾಯಿನಾಥ ಭಟ್ಟ, ವೆಂಕಟೇಶ ಕಟ್ಟಿಮನಿ, ಅನುರುದ್ದೀನ್ ಮೇಸ್ತ್ರಿ, ಆಂಜನೇಯ ಬಾರಕೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

