ರಾಯಚೂರು

ವೇತನ ವಿಳಂಬ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Published On :

ರಾಯಚೂರು: ಸ್ಥಳೀಯ ನಗರಸಭೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವೇತನವನ್ನು ಕಳೆದ ಮೂರು ತಿಂಗಳಿನಿಂದ ಅನಗತ್ಯವಾಗಿ ತಡೆಹಿಡಿದಿರುವ ನಗರಸಭೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಾ. ಬಾಬು ಜಗಜೀವನರಾಂ ಯುವಕ ಸಂಘ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ಎಂ.ಪಿ. ಶಿವಪ್ಪ ಮತ್ತಿತರರು, ನಗರಸಭೆಯ ಎಇಇ ವೆಂಕಟೇಶ್ ಮತ್ತು ಜೆಇ ಕೃಷ್ಣ ಅವರುಗಳು ಕಳೆದ ಮೂರು ತಿಂಗಳಿನಿಂದ ದಿನಗೂಲಿ ನೌಕರರಿಗೆ ವೇತನವನ್ನು ನೀಡದೇ ವಿಳಂಬ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ದಿನಗೂಲಿ ನೌಕರರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದರೂ ವೇತನ ತಡೆಹಿಡಿದಿದ್ದು, ಈ ಬಗ್ಗೆ ಪ್ರಶ್ನಿಸಿದರೆ ಈ ಇಬ್ಬರು ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ವೇತನ ತಡೆಹಿಡಿದಿರುವುದರಿಂದ ನೌಕರರ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ ಎಂದು ದೂರಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ತಡೆಹಿಡಿದ ದಿನಗೂಲಿ ಸಿಬ್ಬಂದಿಯ ವೇತನವನ್ನು ಕೂಡಲೇ ಪಾವತಿಸಲು ವ್ಯವಸ್ಥೆ ಮಾಡಿ ಅನುಚಿತವಾಗಿ ವರ್ತಿಸುತ್ತಿರುವ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಪರಸಪ್ಪ, ಜಿಂದಪ್ಪ, ರವಿ, ತಾಯಣ್ಣ, ನಾಗರಾಜ್, ಭೀಮರೆಡ್ಡಿ, ನರಸಿಂಹಲು, ಅಂಜಿ, ಸುರೇಶ್ ಮತ್ತು ನಗರಸಭೆಯ ದಿನಗೂಲಿ ನೌಕರರು ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.