19ರಂದು ರಥೋತ್ಸವ
ಸಿಂಧನೂರು: ನಗರದ ಬ್ರಾಹ್ಮಣರ ಓಣಿಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಏ.11ರಿಂದ ಶ್ರೀರಾಮ ನವಮಿ ಉತ್ಸವದ ಕಾರ್ಯಕ್ರಮಗಳು ಆರಂಭಗೊಂಡಿದ್ದು 19 ರಂದು ರಥೋತ್ಸವ, ಪ್ರವಚನ ಕಾರ್ಯಕ್ರಮಗಳು ಮತ್ತು 20 ರಂದು ಗೋಪಾಳ ಕಾವಲಿ, ಅವಭೃತ ಸ್ನಾನ, ಭಜನೆ ಮತ್ತಿತರ ಕಾರ್ಯಕ್ರಮಗಳು ಜರುಗಲಿವೆ ಎಂದು ತಾಲೂಕ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮರಾವ್ ಕುಲಕರ್ಣಿ ಹಾಗೂ ಶ್ರೀರಾಮ ಮಂದಿರದ ಅರ್ಚಕ ಕೃಷ್ಣಶಾಸ್ತ್ರಿ ತಿಳಿಸಿದ್ದಾರೆ.
ಏ.19 ರಂದು ತುಳಸಿ ಅರ್ಚನೆ, ಸಕಲ ಮಂಗಲ ವಾದ್ಯಗಳು, ವೇದ ಘೋಷ, ವಿವಿಧ ಭಜನಾ ಮಂಡಳಿಗಳೊಂದಿಗೆ ರಥೋತ್ಸವ ಹಾಗೂ ತೀರ್ಥ ಪ್ರಸಾದ ನಡೆಯಲಿದೆ. ಸಂಜೆ 6ಕ್ಕೆ ರಾಮಬಾಬು ಶರ್ಮಾ ಸೋಮಯಾಜಿ ಹಾಗೂ ಪಣಿಯೇಂದ್ರ ಶರ್ಮಾ ಸೋಮಯಾಜಿ ಅವರಿಂದ ರಾಮಾಯಣ ಪ್ರವಚನ ನಡೆಯಲಿದೆ. 20 ರಂದು ಸನಾತನ ಸಂಸ್ಥೆಯ ವತಿಯಿಂದ ಸಾತ್ವಿಕ ವಸ್ತುಗಳು ಮತ್ತು ಗ್ರಂಥ ಪ್ರದರ್ಶನ ನಡೆಯಲಿದ್ದು ಭಕ್ತಾಧಿಗಳಿಗೆ ಅನ್ನಸಂತರ್ಪಣೆಯನ್ನು ನೂತನ ನಗರಸಭಾ ಸದಸ್ಯ ವೆಂಕಟರಾವ್ ಬಂಡಿ ಏರ್ಪಡಿಸಿದ್ದಾರೆ. ಸಕಲ ಸದ್ಬಕ್ತರು ತಪ್ಪದೇ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದ್ದಾರೆ.
ಬಿಸಿಯೂಟ ವಿಸ್ತರಣೆಗೆ ಆಗ್ರಹ
ರಾಯಚೂರು: ಜಿಲ್ಲೆಯು ಬರಪೀಡಿತ ಪ್ರದೇಶವಾಗಿದ್ದು, ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಆಗ್ರಹಿಸಿದೆ. ಈ ಕುರಿತು ಜಿಪಂ ಸಿಇಒಗೆ ಮನವಿ ಸಲ್ಲಿಸಿ, ಜಿಲ್ಲೆಯು ಬರಪೀಡಿತ ಪ್ರದೇಶವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಬಡವರಾಗಿದ್ದಾರೆ. ಅಂಥವರಿಗೆ ಬಿಸಿಯೂಟ ಯೋಜನೆಯ ಪ್ರಯೋಜನ ದೊರೆಯಬೇಕಿದೆ. ಸದ್ಯ ಕೇವಲ ಕೆಲವೇ ಕೆಲ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಯಲ್ಲಿದ್ದು, ಎಲ್ಲ ಶಾಲೆಗಳಿಗೆ ವಿಸ್ತರಿಸುವಂತೆ ಸಂಘದ ಕಾರ್ಯಕರ್ತರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಈರಣ್ಣ, ಅಧ್ಯಕ್ಷೆ ಕಲ್ಯಾಣಮ್ಮ, ಖಜಾಂಚಿ ನಾಗಮ್ಮ ಸೇರಿದಂತೆ ಅನೇಕರಿದ್ದರು.
ಕಾರು ಪಲ್ಟಿ; ವ್ಯಕ್ತಿ ಸಾವು
ರಾಯಚೂರು: ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಸಮೀಪ ಕಾರೊಂದು ಪಲ್ಟಿಯಾಗಿ ಅದರ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಮೃತನನ್ನು ಬಸವರಾಜಪ್ಪ ಎಂದು ಗುರುತಿಸಲಾಗಿದೆ. ಈತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ಗೆ ಮಾರ್ಗ ನೀಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರ್ ರಸ್ತೆ ಬದಿಗೆ ಪಲ್ಟಿಯಾಗಿ ಸ್ಥಳದಲಿಯೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

