ಕಾಂಗ್ರೆಸ್ ಪರ ಅಲೆ: ವೆಂಕಟೇಶ ವಿಶ್ವಾಸ
ದೇವದುರ್ಗ: ಜನತೆ ಕಾಂಗ್ರೆಸ್ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ದು, ಕ್ಷೇತ್ರದಲ್ಲಿ ತಮ್ಮ ಗೆಲವು ಖಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದ ಎ. ವೆಂಕಟೇಶ ನಾಯಕ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಕೆ. ಶಿವನಗೌಡ ನಾಯಕರ ದ್ವೇಷದ ರಾಜಕೀಯದಿಂದ ತಾಲೂಕಿನಲ್ಲಿ ಅಭಿವೃದ್ಧಿ ಸಾಧ್ಯವಾಗಿಲ್ಲ. ಕೇವಲ ಅನುದಾನದ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.
ಕ್ಷೇತ್ರದ ಮತದಾರರು ಈ ಬಾರಿ ಶಿವನಗೌಡ ನಾಯಕರ ಭರವಸೆಗಳಿಗೆ ಮಾರುಹೋಗುವುದಿಲ್ಲ. ಅವರು ಒಡ್ಡುವ ಆಮಿಷಕ್ಕೆ ಬಲಿಯಾಗುವುದಿಲ್ಲ. ಕಾಂಗ್ರೆಸ್ ಪರ ಅಲೆಯಿದ್ದು, ತಮ್ಮನ್ನು ಬೆಂಬಲಿಸಲಿದ್ದಾರೆ. ಬುದ್ಧಿವಂತರು, ಪ್ರಜ್ಞಾವಂತ ಮತದಾರರು ತಾಲೂಕಿನಲ್ಲಿದ್ದು, ತಮ್ಮ ಆಯ್ಕೆಯಲ್ಲಿ ಯಾವುದೇ ರೀತಿಯ ಸಂಶಯವಿಲ್ಲ ಎಂದರು.
ಮತದಾರರು ತಮ್ಮನ್ನು ಬೆಂಬಲಿಸಿದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ತೊಂದರೆಯಾಗದು ಎಂದು ಭರವಸೆ ನೀಡಿದರು.
ಈ ಸಂದರ್ಭ ಮುಂಡರಗಿ ಜಿಪಂ ಸದಸ್ಯ ಶಿವಣ್ಣ ತಾತಾ, ರಾಜಾ ಚಂದ್ರಹಾಸ ನಾಯಕ, ಎ. ಮಲ್ಲಿಕಾರ್ಜುನ ಪಾಟೀಲ್, ನಾಗಪ್ಪ ಗಿರಿಣಿ, ಅಮರೇಗೌಡ ಗೌರಂಪೇಟ ವಕೀಲರು, ವೇಣುಗೋಪಾಲ ವಕೀಲರು, ಸೇರಿದಂತೆ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

