13 ಮಂದಿ ವಿರುದ್ಧ ಪ್ರಕರಣ ದಾಖಲು
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಏ.16
ದೇವದುರ್ಗದಲ್ಲಿ ನಾಮಪತ್ರ ಸಲ್ಲಿಸಲು ಆಗಮಿಸಿದ ಬಿಜೆಪಿಯ ಕೆಲವರು ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 13 ಜನರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.
ಸ್ಥಳೀಯ ಲಿಂಗಸ್ಗೂರು ಮತ್ತು ಮಸ್ಕಿ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಗೆ ಮಂಗಳವಾರ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವದುರ್ಗದಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲು ಆಗಮಿಸಿದಾಗ ನಿಯಮ ಉಲ್ಲಂಘನೆ ಮಾಡಿದ್ದು, ಐಪಿಸಿ ಸೆಕ್ಷೆನ್ 140, 143, 188, 353, 504, 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ 491 ರೌಡಿ ಶೀಟ್ನಲ್ಲಿ ಹೆಸರಿರುವ ಜನರಿಗೆ ಚುನಾವಣಾ ಮುಂಜಾಗ್ರತಾ ಕ್ರಮವಾಗಿ 295 ಜನರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳಲಾಗಿದೆ. 299 ಜನ ಮಧ್ಯವರ್ತಿಗಳೆಂದು ಗುರುತಿಸಲಾಗಿದೆ.
ಮೂವರ ಬಂಧನ: ಚುನಾವಣೆ ಹಿನ್ನೆಲೆಯಲ್ಲಿ ಲಿಂಗಸ್ಗೂರಲ್ಲಿ 3 ಸೇರಿದಂತೆ ಜಿಲ್ಲೆಯಲ್ಲಿ 12 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯಿಂದ 15 ಬಾರಿ ದಾಳಿ ನಡೆಸಿ 3 ಪ್ರಕರಣ ದಾಖಲಿಸಲಾಗಿದ್ದು, 3 ಜನರನ್ನು ಬಂಧಿಸಲಾಗಿದೆ ಮತ್ತು 1000 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 57,542 ಮತದಾರರ ಸೇರ್ಪಡೆ: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಪ್ರಯುಕ್ತ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ (ಫಾರ್ಮ-6) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ 3,305. ರಾಯಚೂರು ನಗರ ಕ್ಷೇತ್ರದಲ್ಲಿ 11,077. ಮಾನವಿ ಕ್ಷೇತ್ರದಲ್ಲಿ 8,624. ದೇವದುರ್ಗ ಕ್ಷೇತ್ರದಲ್ಲಿ 7,254. ಲಿಂಗಸ್ಗೂರು ಕ್ಷೇತ್ರದಲ್ಲಿ 10,887. ಸಿಂಧನೂರು ಕ್ಷೇತ್ರದಲ್ಲಿ 10,203 ಹಾಗೂ ಮಸ್ಕಿ ಕ್ಷೇತ್ರದಲ್ಲಿ 6,252 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 57,542 ಮತದಾರರ ಹೆಸರು ಸೇರ್ಪಡೆಗೊಳಿಸಲಾಗಿದ್ದು, ಇದರಲ್ಲಿ 52,363 ಮತದಾರರ ಚೀಟಿ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಲಿಂಗಸ್ಗೂರು ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಟಿ. ಯೋಗೇಶ, ತಹಸೀಲ್ದಾರ್ ಎನ್.ಬಿ. ಪಾಟೀಲ್ ಇದ್ದರು.
ಸಂಚಾರಿ ದಳಗಳ ರಚನೆ
ರಾಯಚೂರು: ಚುನಾವಣೆಯನ್ನು ಶಾಂತಿಯುತ ಮತ್ತು ಸುಗಮವಾಗಿ ನಿರ್ವಹಿಸಲು ಜಿಲ್ಲಾಡಳಿತವು ವಿಧಾನಸಭೆ ಕ್ಷೇತ್ರಗಳಿಗೆ ಹೋಬಳಿವಾರು ಸಂಚಾರಿ ದಳ ರಚಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಆದೇಶ ಹೊರಡಿಸಿದ್ದು, ತಂಡದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿ, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸಪೆಕ್ಟರ್, ವಿಡಿಯೋ ತಂಡದವರು ಇರಲಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

