ಉಮೇದುವಾರಿಕೆಗೆ ಭಾರಿ ಮೆರವಣಿಗೆ
ಕನ್ನಡಪ್ರಭ ವಾರ್ತೆ, ಸಿಂಧನೂರು, ಏ.17
ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಕೆಜೆಪಿ, ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿಗಳು ಬೃಹತ್ ಮೆರವಣಿಗೆಯೊಂದಿಗೆ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಬುಧವಾರ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಸಿಪಿಐ, ಬಿಎಸ್ಪಿ, ಜೆಡಿಯು, ಸಿಪಿಎಂ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಮತ್ತೊಂದು ಸೆಟ್ಟಿನಲ್ಲಿ ನಾಮಪತ್ರಗಳನ್ನು ಸಲ್ಲಿಸಿದರು. ಇವರಲ್ಲದೆ ಪಕ್ಷೇತರರಾಗಿ ಪಕ್ಷೇತರರಾಗಿ ಸಾಬೀರಪಾಷಾ, ಗೌಡಪ್ಪ ಸುಕಾಲಪೇಟೆ, ರಾಮಣ್ಣ ಎಲೆಕೂಡ್ಲಿಗಿ, ಬಸನಗೌಡ ಉದ್ಬಾಳ, ಬಸವರಾಜ ಚನ್ನಳ್ಳಿ ಉಮೇದುವಾರಿಗೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಬುಧವಾರ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕೆಜೆಪಿ ಮೆರವಣಿಗೆ: ಬೆ.10.30ರ ಸುಮಾರಿಗೆ ಕೆಜೆಪಿ ಅಭ್ಯರ್ಥಿ ರಾಜಶೇಖರ ಪಾಟೀಲ್ ಮತ್ತು ಸಾವಿರಾರು ಸಂಖ್ಯೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಬೃಹತ್ ಬಾವುಟಗಳನ್ನು ಪ್ರದರ್ಶಿಸುತ್ತಾ ತಹಸೀಲ್ದಾರ್ ಕಚೇರಿಗೆ ಬಂದರು. ನಂತರ ನಾಮಪತ್ರ ಸಲ್ಲಿಸಿ ಮೆರವಣಿಗೆಯೊಂದಿಗೆ ಪಕ್ಷದ ಕಾರ್ಯಾಲಯಕ್ಕೆ ತೆರಳಿದರು. ಮುಖಂಡರಾದ ಖುಸ್ರೋ ಖುರೇಸಿ, ಸಿ.ಟಿ. ಪಾಟೀಲ್, ಎಂ.ಬಿ. ಪಾಟೀಲ್, ಸಂದೀಪ್ ಪಾಟೀಲ್, ಎಂ.ಡಿ.ನದೀಮುಲ್ಲಾ, ಬಸವಂತರಾವ್, ಹಾಜಿಮಸ್ತಾನ್, ಲಿಂಗರಾಜ ಹೂಗಾರ, ಶೇಖರಪ್ಪ ಹೂಗಾರ, ರವಿ, ಮಂಜುನಾಥಗೌಡ ಎಚ್. ಮತ್ತಿತರರು ಭಾಗವಹಿಸಿದ್ದರು.
ಬಿಎಸ್ಸಾರ್ ಕಾಂಗ್ರೆಸ್ ಮೆರವರಣಿಗೆ: ಬಿಎಸ್ಸಾರ್ ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಕೆ.ಕರಿಯಪ್ಪ ಎಪಿಎಂಸಿ ಗಣೇಶ ದೇವಸ್ಥಾನದಿಂದ ಚಕ್ಕಡಿಯಲ್ಲಿ ಫ್ಯಾನ್ನೊಂದಿಗೆ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ಆಗಮಿಸಿದರು. ಗಾಂಧೀಜಿ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಘೋಷಣೆ ಕೂಗಿದ ನಂತರ ತಹಸೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಸಂಚಾರ ಅಸ್ತವ್ಯಸ್ತ: ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ಭರಾಟೆಯಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸ್ ಅಧಿಕಾರಿಗಳು ಸುಗಮ ಸಂಚಾರಕ್ಕೆ ಹೆಣಗಾಡುತ್ತಿದ್ದ ದೃಶ್ಯ ಕಂಡುಬಂತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

