ರಾಯಚೂರು

ಪಾಳೇಗಾರಿಕೆ ವರ್ತನೆಗೆ ತಕ್ಕಪಾಠ ಕಲಿಸಿ: ಬಿಎಸ್‌ವೈ

Published On :

ದೇವದುರ್ಗ: ಪಾಳೇಗಾರಿಕೆ ವರ್ತನೆ ಪ್ರದರ್ಶಿಸಿದವರಿಗೆ ಪ್ರಸಕ್ತ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆಂದು ಮಾಜಿ ಸಿಎಂ ಹಾಗೂ ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಎಚ್ಚರಿಸಿದರು.
ಅವರು ಪಟ್ಟಣದಲ್ಲಿ ಬುಧವಾರ ಕೆಜೆಪಿ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಲಾಭ ಪಡೆವರೆಲ್ಲರೂ ತಮಗೆ ಬೆನ್ನಿಗೆ ಚೂರಿ ಹಾಕಿದ್ದಾರೆ. ಅಂಥವರಿಗೆ ಮತದಾರರು ತಕ್ಕಪಾಠ ಕಲಿಸಬೇಕು ಎಂದು ಮನವಿ ಮಾಡಿದರು.
ದೇವದುರ್ಗ ತಾಲೂಕು ಹಿಂದುಳಿದ ತಾಲೂಕು ಎಂದು 2 ಸಾವಿರ ಕೋಟಿ ಅನುದಾನ ತಾವು ಒದಗಿಸಿದ್ದು,  ಅನುದಾನ ದುರ್ಬಳಕೆಯಾಗಿದೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ಸಮಗ್ರ ತನಿಖೆಯಾಗಬೇಕಿದೆ. ತಾಲೂಕಿನ ಅಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನವನ್ನು ಸಮರ್ಪಕ ಬಳಕೆಯಾಗಿಲ್ಲ. ಇದರ ಬಗ್ಗೆ ತನಿಖೆ ನಡೆದಲ್ಲಿ ಶಾಸಕ ನಾಯಕ ಕಾರಾಗೃಹ ಸೇರುವುದು ಖಚಿತ ಎಂದು ಹೇಳಿದರು.
ರಾಜ್ಯದ ಜನತೆ ತಮಗೆ ಅವಕಾಶ ನೀಡಿದರೆ ದೇಶದಲ್ಲಿಯೇ ಕರ್ನಾಟಕವನ್ನು ಮಾದರಿ ರಾಜ್ಯವಾಗಿಸುವುದಾಗಿ ಅವರು ಭರವಸೆ ನೀಡಿ, 65 ವರ್ಷ ಮೇಲ್ಪಟ್ಟ ರೈತರಿಗೆ ಮಾಸಾಶನ, ರೈತರಿಗೆ 1 ಲಕ್ಷವರೆಗೆ ಸಂಪೂರ್ಣ ಸಾಲ ಮನ್ನಾ, ಭಾಗ್ಯಲಕ್ಷ್ಮೀ ಯೋಜನೆ ಮಧ್ಯಮ ವರ್ಗದವರಿಗೂ ವಿಸ್ತರಣೆ ಸೇರಿದಂತೆ ಅನೇಕ ಕಾರ್ಯಕ್ರಮ ಹಾಕಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಕೆಜೆಪಿ ಅಭ್ಯರ್ಥಿ ಶಾಂತಗೌಡ, ಪಕ್ಷದ ಜಿಲ್ಲಾಧ್ಯಕ್ಷ ವೆಂಕನಗೌಡ ಮಲ್ಕಾಪುರ, ಸಿದ್ಲಿಂಗಪ್ಪ ಗೌಡ ನಾಗಡದಿನ್ನಿ, ಭಾನುಪ್ರಕಾಶ್ ಖೇಣದ್ ಸೇರಿ ಪಕ್ಷದ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.