ರಾಯಚೂರು

ಕೆಜೆಪಿ- ಕಾಂಗ್ರೆಸ್ ನೇರ ಪೈಪೋಟಿ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಏ.17
ದೇಶದಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಬಲವಾಗಿದ್ದು, ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಪಕ್ಷ ಕಾಂಗ್ರೆಸ್ ಜೊತೆ ನೇರ ಪೈಪೋಟಿ ನಡೆಸಲಿದೆ ಎಂದು ಕೆಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಪಟ್ಟಣದ ಕೆಜೆಪಿ ಪಕ್ಷದ ಮುಖಂಡ ರಮೇಶ ಶಾಸ್ತ್ರಿ ಅವರ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ರಾಜ್ಯದೆಲ್ಲೆಡೆ ಈಗಾಗಲೇ 205 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 11 ಜನ ಮುಸ್ಲಿಂ, 12 ಜನ ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಅವಕಾಶ ನೀಡಲಾಗಿದೆ. ಪಕ್ಷ ಕಟ್ಟಿ ಕೇವಲ ನಾಲ್ಕು ತಿಂಗಳಲ್ಲಿ 2 ಚುನಾವಣೆ ಎದುರಿಸಲಾಗುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಒಳಜಗಳ ಉಲ್ಬಣಗೊಂಡಿದೆ. ಇನ್ನು ಬಿಜೆಪಿ ನಿರಾಶೆ ಮನೋಭಾವ ತಾಳಿದೆ. ಇದೆಲ್ಲ ಗಮನಿಸಿದರೆ ಕೆಜೆಪಿ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಅವಶ್ಯಕತೆಯಿದ್ದು, ರಾಷ್ಟ್ರೀಯ ಪಕ್ಷಗಳು ತಮ್ಮ ಅಸ್ಥಿತ್ವ ಕಳೆದುಕೊಳ್ಳುತ್ತಿವೆ. ಚುನಾವಣಾ ಫಲಿತಾಂಶ ಬಂದ ನಂತರ ರಾಜ್ಯಕ್ಕೆ ಪ್ರಬಲವಾದ ತೃತೀಯ ರಂಗ ರಚನೆ (ಥರ್ಡ ಫ್ರಂಟ್) ಅವಶ್ಯವಿದೆ. ಇದರಿಂದ ದೇಶದ ರಾಜಕಾರಣದಲ್ಲಿ ಹೊಸ ತಿರುವು ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ವೆಂಕನಗೌಡ ಮಲ್ಕಾಪುರ, ಲಿಂಗಸ್ಗೂರು ಅಭ್ಯರ್ಥಿ ಎಚ್.ಬಿ. ಮುರಾರಿ, ಮಸ್ಕಿ ಅಭ್ಯರ್ಥಿ ಮಹಾದೇವಪ್ಪಗೌಡ, ದೊಡ್ಡಬಸಪ್ಪ ಅಂಗಡಿ, ಶರಣಯ್ಯ ಗೊರೇಬಾಳ, ಶರಣಗೌಡ ಬಸಾಪುರ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.