ಜಯ ಕರ್ನಾಟಕ ಗ್ರಾಮ ಘಟಕ ರಚನೆ
ಸಿಂಧನೂರು: ತಾಲೂಕಿನ ಕೆ.ಬಸಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಘಟನೆಯ ನೂತನ ಗ್ರಾಮ ಘಟಕವನ್ನು ರಚಿಸಲಾಯಿತು. ತಾಲೂಕು ಅಧ್ಯಕ್ಷ ಬಸವರಾಜ ಬಡಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ನರಸಪ್ಪ ಅಮರಾಪುರ, ಉಪಾಧ್ಯಕ್ಷ ನಾಗೇಶ ಮರಾಠಿ, ನಗರ ಘಟಕದ ಅಧ್ಯಕ್ಷ ಎಂ.ಎಸ್. ಮುತ್ತು ಮತ್ತಿತರರು ಉಪಸ್ಥಿತರಿದ್ದರು.
ಪದಾಧಿಕಾರಿಗಳು: ಗ್ರಾಮ ಘಟಕದ ಗೌರವಾಧ್ಯಕ್ಷರಾಗಿ ಮೌನೇಶ ಶಿಳ್ಳಿ, ಅಧ್ಯಕ್ಷರಾಗಿ ಶಿವಪುತ್ರ ಸಂಗನಾಳ, ಉಪಾಧ್ಯಕ್ಷರಾಗಿ ರಮೇಶ ಅಯೋದಿ, ಕಾರ್ಯದರ್ಶಿಯಾಗಿ ಬಸವರಾಜಸ್ವಾಮಿ, ಖಜಾಂಚಿಯಾಗಿ ಮಲ್ಲೇಶಗೌಡ ಪೊಲೀಸ್ ಪಾಟೀಲ್, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ ಕುಂಟೋಜಿ, ಪ್ರಧಾನ ಕಾರ್ಯದರ್ಶಿಯಾಗಿ ಅಮರೇಶ ಜಿನ್ನಿಂಗ್ ನೇಮಕವಾದರು.
--
ಇಂದಿನಿಂದ ಉಚಿತ ತರಬೇತಿ
ರಾಯಚೂರು: ಗುಲ್ಬರ್ಗದ ಕಾಯಕ ಶಿಕ್ಷಣ ಸಂಸ್ಥೆಯ ಸರ್ವಜ್ಞ ವಿಜ್ಞಾನ ವಸತಿ ಪದವಿ ಪೂರ್ವ ಮಹಾವಿದ್ಯಾಲಯದಿಂದ ನಗರದ ಲಿಂಗಸ್ಗೂರು ರಸ್ತೆಯಲ್ಲಿರುವ ನಿವೃತ್ತ ನ್ಯಾಯಮೂರ್ತಿ ಡಾ. ಶಿವರಾಜ ಪಾಟೀಲ್ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಏ.19ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಉಚಿತ ಸೇತುಬಂಧ(ಬ್ರಿಡ್ಜ್ ಕೋರ್ಸ್) ತರಬೇತಿ ಆಯೋಜಿಸಲಾಗಿದೆ. ಪಿಯುಸಿ ಪ್ರಥಮ ವರ್ಷದ ಪ್ರವೇಶ ವಿಜ್ಞಾನ ವಿಷಯಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಚನ್ನಾರೆಡ್ಡಿ ಪಾಟೀಲ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ಭೌತಶಾಸ್ತ್ರ, ರಾಸಾಯನಿಕ ಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಕನ್ನಡ, ಇಂಗ್ಲಿಷ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯ ಕುರಿತು ತರಬೇತಿ ನೀಡಲಾಗುತ್ತಿದೆ. ಈ ತರಬೇತಿಯು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶರಣಗೌಡ ಮೊಬೈಲ್ ನಂಬರ್ 99807-82030 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

