ಮುಸ್ಲಿಂ ಯುವಕರು ಕಾಂಗ್ರೆಸ್ಗೆ
ಕನ್ನಡಪ್ರಭ ವಾರ್ತೆ, ಮುದಗಲ್, ಏ.18
ಇತ್ತೀಚೆಗೆ ನಡೆದ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿ ನಂತರ ಬಿಎಸ್ಆರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಶಿವರಾಜ ತಳವಾರ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು.
ಇಂದು ಕಾಂಗ್ರೆಸ್ ಅಭ್ಯರ್ಥಿ ಡಿ. ಹೂಲಗೇರಿ ಅವರ ನೂತನ ವಸತಿಗಾಗಿ ನಿರ್ಮಿಸುತ್ತಿರುವ ಕಟ್ಟಡದಲ್ಲಿ ಜರುಗಿದ ಕಾಂಗ್ರೆಸ್ ಸೇರ್ಪಡೆ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನ್ವರಖಾನ್ ಹಾಗೂ ಅಭ್ಯರ್ಥಿ ಡಿ.ಎಸ್. ಹೂಲಗೇರಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಇವರ ಜೊತೆಗೆ ಬಿಎಸ್ಆರ್ ಮುಖಂಡ ಸಂಗಪ್ಪ ಪಟ್ಟಣಶೆಟ್ಟಿ ಸೇರಿದಂತೆ ಅನೇಕ ಮುಸ್ಲಿಂ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನಂತರ ಮಾತನಾಡಿದ ಪಕ್ಷದ ಯುವ ಮುಖಂಡ ಮಹಾಂತೇಶ ಪಾಟೀಲ ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವುದು ಸಂತಸದ ವಿಷಯ. ಪಕ್ಷದ ವಿಷಯಗಳಿಗೆ ವ್ಯಕ್ತಗತವಾಗಿ ವಿಷಯ ತಿಳಿದಿಲ್ಲವೆಂದು ಸಂಘಟನೆಯಿಂದ ದೂರ ಸರಿಯುವುದು, ಚುನಾವಣೆಯ ನಿಟ್ಟಿನಲ್ಲಿ ಸಂಘಟನಾತ್ಮಕವಾದ ಕಾರ್ಯ ನಿರ್ವಹಿಸಿ ಪಕ್ಷದ ಅಭ್ಯರ್ಥಿ ಡಿ.ಎಸ್. ಹೂಲಗೇರಿಯವರ ಗೆಲುವಿಗಾಗಿ ಶ್ರಮಿಸೋಣ ಎಂದು ಮನವಿ ಮಾಡಿಕೊಂಡರು. ವೇದಿಕೆ ಮೇಲೆ ಮುಖಂಡರಾದ ಸುರೇಶಗೌಡ ಆದಾಪುರ, ಸುರೇಶ ಶೇಠ, ಷರೀಫ್ ವಕೀಲರು, ರಾಮಣ್ಣ ಹಿರೇಮನಿ, ಷಣ್ಮುಕಪ್ಪ ಚಲುವಾದಿ, ಪಪಂ ಸದಸ್ಯ ಮಾಸೂಮ್ ಷರೀಫ್, ಮಹ್ಮದ ರಫೀ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಜೆಡಿಎಸ್ ತೊರೆದು ಮುಖಂಡ ಇಸ್ಮಾಯಿಲ್ ನೇತೃತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಸೇರಿದರು. ಅಭ್ಯರ್ಥಿ ಡಿ.ಎಸ್. ಹೂಲಗೇರಿ ಹಾಗೂ ಮುದಗಲ್ ಬ್ಲಾಕ್ ಅಧ್ಯಕ್ಷ ಮುನ್ವಕ ಖಾನ್ ಸ್ವಾಗತಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

