ಅಕ್ರಮ ತಡೆಗೆ ಆಯೋಗ ಕಣ್ಗಾವಲು
ಅಕ್ರಮ ತಡೆಗೆ ಚೆಕ್ಪೋಸ್ಟ್ ಬಳಿ ಸಿಸಿ ಕ್ಯಾಮೆರಾ ಅಳವಡಿಕೆ
ಕನ್ನಡಪ್ರಭ ವಾರ್ತೆ ಮುದಗಲ್ ಏ.19
ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ತಡೆಗೆ ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್ಪೋಸ್ಟ್ ನಿರ್ಮಿಸಲಾಗಿದೆ. ಅಲ್ಲದೆ ಚೆಕ್ಪೋಸ್ಟ್ಗಳಲ್ಲಿ ನಡೆಯುವ ಕಾರ್ಯಗಳನ್ನು ಸೆರೆ ಹಿಡಿಯಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಜಿಲ್ಲೆಯ ಗಡಿಭಾಗವಾದ ಬೆಳ್ಳಿಹಾಳ ಗ್ರಾಮದ ಹತ್ತಿರ ಪೊಲೀಸ್ ಚೆಕ್ಪೋಸ್ಟ್ ನಿರ್ಮಿಸುವ ಮೂಲಕ ಚುನಾವಣೆಯಲ್ಲಿ ಅಕ್ರಮ ತಡೆಯುವಲ್ಲಿ ಎಲ್ಲಡೇ ಕಟ್ಟೆಚ್ಚರ ವಹಿಸಲಾಗಿದೆ. 2013ರ ವಿಧಾನಸಭೆ ಚುನಾವಣೆಗೆ ಆಯೋಗ ಹದ್ದಿನಕಣ್ಣಿಟ್ಟಿದ್ದು ಬಾಗಲಕೋಟೆ ರಸ್ತೆಗೆ ಬೆಳ್ಳಿಹಾಳ, ಗಂಗಾವತಿ ರಸ್ತೆಗೆ ಛತ್ತರ ಗ್ರಾಮಗಳ ಹತ್ತಿರ ಪೊಲೀಸರು ಚೆಕ್ ಪೋಸ್ಟ್ಗಳನ್ನು ನಿರ್ಮಿಸುವ ಮೂಲಕ ರಸ್ತೆಗೆ ತೆರಳುವ ಪ್ರತಿಯೊಂದು ವಾಹನಗಳನ್ನು ತಪಾಸಣೆಗೊಳ ಪಡಿಸಲಾಗುತ್ತಿದೆ.
ಅನುಮಾನಗೊಂಡ ವ್ಯಕ್ತಿಗಳ, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅಕ್ರಮವಾಗಿ ಸಾಗಿಸುವ ಮದ್ಯ, ಹಣ ಕುರಿತಂತೆ ತೀವ್ರ ಎಚ್ಚರಿಕೆ ಕೈಗೊಳ್ಳಲಾಗಿದೆ. ಕಳೆದ ವಿಧಾನಸಭೆ ಚುನಾವಣೆಗಿಂತಲೂ ಈ ಬಾರಿ ಒಂದು ಹೆಜ್ಜೆ ಮುಂದಿಟ್ಟಿರುವ ಚುನಾವಣಾ ಆಯೋಗ ಚೆಕ್ಪೋಸ್ಟ್ಗಳಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸುವ ಮೂಲಕ ತಪಾಸಣೆಗೆ ಹೈಟೆಕ್ ಸ್ಪರ್ಶ ನೀಡಲಾಗಿದೆ.
ಆಂಧ್ರ-ಮಹಾರಾಷ್ಟ್ರ ಅಂತಾರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅಹೋರಾತ್ರಿ ಓಡಾಡುವ ಸಾವಿರಾರು ವಾಹನಗಳ ತಪಾಸಣೆಗೆ ಪೊಲೀಸ್ ಇಲಾಖೆ ಸರ್ಪಗಾವಲು ಹಾಕಲಾಗಿದೆ. ಈ ಮೂಲಕ ಮತದಾರರನ್ನು ಓಲೈಸುವಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ನಡೆಸಿರುವ ಕಸರತ್ತಿಗೆ ತಣ್ಣಿರೆರೆಚಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

