ಕಾಂಗ್ರೆಸ್ನಿಂದ ಮಾತ್ರ ಸ್ಥಿರ ಸರ್ಕಾರ: ಸತೀಶ್
ಸಿಂಧನೂರು: ಪ್ರಾದೇಶಿಕ ಪಕ್ಷಗಳು ಜನರ ಮನಸ್ಸಿನಿಂದ ದೂರವಾಗುತ್ತಿವೆ. ಬಿಜೆಪಿಯ ಐದು ವರ್ಷಗಳ ಹಗರಣಗಳ ರಾಜಕೀಯದಿಂದ ಜನತೆ ರೋಸಿ ಹೋಗಿದ್ದಾರೆ.
ಕಾಂಗ್ರೆಸ್ ಅಲೆ ಎಲ್ಲೆಡೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್ನಿಂದ ಮಾತ್ರ ಸ್ಥಿರ ಸರ್ಕಾರ ಸಾಧ್ಯ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಹೇಳಿದರು.
ಬಲಿದಾನ: ಅವರು ಶುಕ್ರವಾರ ಆರ್ಜಿಎಂ ಮೈದಾನದಲ್ಲಿ ಚುನಾವಣಾ ಪ್ರಚಾರಾರ್ಥ ಬಹಿರಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಈ ದೇಶಕ್ಕೆ ಅನೇಕ ಮಹತ್ವದ ಯೋಜನೆಗಳನ್ನು ನೀಡಿದೆ. ದೇಶದ ಸಮಗ್ರತೆ ಹಾಗೂ ಏಕತೆಗಾಗಿ ನೆಹರು ಮತ್ತು ಗಾಂಧಿ ಕುಟುಂಬಗಳು ಬಲಿದಾನವನ್ನು ಮಾಡಿವೆ. ಕಾಂಗ್ರೆಸ್ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ದೇಶ ಭಕ್ತಿಯನ್ನು ಸಹ ಮೆರೆದಿದೆ ಎಂದು ಹೇಳಿದರು.
ಚಿತ್ರನಟಿ ಭಾವನಾ ಮಾತನಾಡಿದರು. ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸ್ರಾಜ, ಸದಸ್ಯರಾದ ಎನ್.ಶಿವನಾಗಪ್ಪ, ಆರ್.ತಿಮ್ಮಯ್ಯ ನಾಯಕ, ಅಭ್ಯರ್ಥಿಗಳಾದ ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್, ಹಂಪಯ್ಯ ನಾಯಕ, ರಾಜಾರಾಯಪ್ಪ ನಾಯಕ, ರಾಘವೇಂದ್ರ ಹಿಟ್ನಾಳ, ಬಿ.ಎಂ.ನಾಗರಾಜ, ಕಾಂಗ್ರೆಸಸ್ಜಿಲ್ಲಾಧ್ಯಕ್ಷ ವಸಂತಕುಮಾರ, ಉಪಾಧ್ಯಕ್ಷ ಎಂ.ಕಾಳಿಂಗಪ್ಪ, ಕಾರ್ಯದರ್ಶಿ ಯಮನಪ್ಪ ಮಲ್ಲಾಪೂರ, ಎ.ಪಿ.ಎಂ.ಸಿ.ಅಧ್ಯಕ್ಷ ಕರಿಯಪ್ಪ ಹರೇಟನೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾಫರ್ ಜಾಗೀರದಾರ, ಚಂದುಸಾಬ ಮುಳ್ಳೂರು, ಶಿವನಗೌಡ ಎಲೆಕೂಡ್ಲಗಿ, ಮಲ್ಲನಗೌಡ ಕನ್ನಾರಿ, ಲಿಂಗರಾಜ ಹಂಚಿನಾಳಕ್ಯಾಂಪ್, ಕೊಪ್ಪಳ ಲೋಕಸಭಾ ಕ್ಷೇತ್ರದ ಯುವಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ನಾಗರಾಜ, ಹನಮೇಶ ಕಟಾಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

