ನಾಗರಿಕರಿಗೆ ಅಶುದ್ಧ ನೀರು ಪೂರೈಕೆ; ಆರೋಪ
ಕನ್ನಡಪ್ರಭ ವಾರ್ತೆ ರಾಯಚೂರು ಏ.19
ನಗರಕ್ಕೆ ಪೂರೈಕೆಯಾಗುವ ನೀರಿನ ಸೇವನೆಯಿಂದ ಜನಾರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತದೆ ಎಂಬುದು ಪ್ರಯೋಗಾಲಯಗಳಲ್ಲಿ ನಡೆಸಿದ ನೀರಿನ ತಪಾಸಣೆಯಿಂದ ಬಯಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಬೇಕೆಂದು ಜೆಡಿಯು ಮುಖಂಡ ನೂರ್ ಮಹಮದ್ ಹೇಳಿದರು.
ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಕೃಷ್ಣಾ ನದಿಯಿಂದ ನೀರು ಮೇಲೆತ್ತಿ ನಗರದ ಜನತೆಗೆ ಪೂರೈಸಲಾಗುತ್ತಿದೆ. ಆದರೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂಬುದು ವೈಜ್ಞಾನಿಕ ಪ್ರಯೋಗಾಲಯಗಳಲ್ಲಿ ನೀರಿನ ಗುಣಮಟ್ಟದ ತಪಾಸಣೆಯಿಂದ ಸಾಬೀತಾಗಿದೆ ಎಂದು ದೂರಿದರು.
ಆರ್ಟಿಪಿಎಸ್ನ ಬೂದಿ ಮಿಶ್ರಿತ ನೀರು ನಗರದ ಜನತೆಗೆ ಒದಗಿಸಲಾಗುತ್ತಿದೆ. ಈ ನೀರಿನ ನಿರಂತರ ಸೇವನೆಯಿಂದ ಅನೇಕ ರೋಗಗಳಿಗೆ ಜನತೆ ತುತ್ತಾಗುತ್ತಾರೆಂಬುದು ಪ್ರಯೋಗಾಲಯಗಳಲ್ಲಿ ನಡೆಸಲಾದ ನೀರಿನ ಪರಿಶೀಲನೆ ನಂತರದಲ್ಲಿ ಮಾಹಿತಿ ಬಂದಿದೆ ಎಂದು ದೂರಿದರು.
ವಿವಿಧ ರಾಸಾಯನಿಕರ ವಸ್ತುಗಳಿರುವ ಕೃಷ್ಣಾ ನದಿ ನೀರು ಕಲುಷಿತಗೊಂಡಿದೆ. ಇಂಥ ರಾಸಾಯನಿಕಗಳಿರುವ ನೀರಿನ ಸೇವನೆ ಅಪಾಯಕಾರಿಯಾಗಿದೆ. ನಗರಸಭೆಯು ಕೇವಲ ಆಲಂ ಬಳಸಿ ನೀರು ಶುದ್ಧೀಕರಿಸುವ ಕಾರ್ಯ ಮಾಡುತ್ತಿದೆ. ಆದರೆ ಅದರಿಂದ ನೀರು ಶುದ್ಧೀಕರಣ ಅಸಾಧ್ಯ ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಲೇ ನಗರಕ್ಕೆ ಪೂರೈಕೆಯಾಗುತ್ತಿರುವ ನದಿ ನೀರಿನ ಗುಣಮಟ್ಟದ ಪರೀಕ್ಷೆ ಮತ್ತು ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

