ಆಕ್ಷೇಪ ಅರ್ಜಿ ಹಿಂದಕ್ಕೆ; ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಅಂಗೀಕಾರ
ಕನ್ನಡಪ್ರಭ ವಾರ್ತೆ ರಾಯಚೂರು ಏ.19
ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಯಾಸೀನ್ ಅವರ ನಾಮಪತ್ರಕ್ಕೆ ಸಂಬಂಧಿಸಿ ಉಂಟಾಗಿದ್ದ ಗೊಂದಲ ನಿವಾರಣೆಯಾಗಿದ್ದು, ನಾಮಪತ್ರವನ್ನು ಶುಕ್ರವಾರ ಅಂಗೀಕರಿಸಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಯಾಸೀನ್ ಆಸ್ತಿ ಕುರಿತು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ ಅವರು ನಾಮಪತ್ರಗಳ ಪರಿಶೀಲನೆ ವೇಳೆ ಗುರುವಾರ ಆಕ್ಷೇಪ ವ್ಯಕ್ತಪಡಿಸಿ ದೂರಿತ್ತಿದ್ದರು.
ಈ ದೂರಿನ ವಿಚಾರಣೆಯನ್ನು ಚುನಾವಣಾಧಿಕಾರಿ ಮಂಜುಶ್ರೀ ಅವರು ಶುಕ್ರವಾರಕ್ಕೆ ನಿಗದಿ ಮಾಡಿದ್ದರು. ಅದರಂತೆ ಶುಕ್ರವಾರ ಬೆಳಗ್ಗೆ ಚುನಾವಣಾಧಿಕಾರಿ ಕಚೇರಿಯಲ್ಲಿ ನಡೆದ ವಿಚಾರಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪರ ವಕೀಲರು ವಾದ ಮಂಡಿಸಿದರು.
ಹಾಗೆಯೇ ಬಿಜೆಪಿ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ ಅವರು ತಾವು ಸಲ್ಲಿಸಿದ್ದ ಆಸ್ತಿ ಪ್ರಮಾಣ ಪತ್ರ ಕುರಿತ ಆಕ್ಷೇಪಣೆಯನ್ನು ಹಿಂಪಡೆದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಯಾಸೀನ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾಗಿ ಚುನಾವಣಾಧಿಕಾರಿ ತಿಳಿಸಿದರು. ಈ ಮೂಲಕ ಕಾಂಗ್ರೆಸ್ ವಲಯದಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

