ರಾಯಚೂರು

ಕುಡಿವ ನೀರಿನ ಅಭಾವ: ಜಿಪಂಗೆ ಗ್ರಾಮಸ್ಥರ ದೂರು

Published On :

ರಾಯಚೂರು: ಮಾನವಿ ತಾಲೂಕಿನ ಚಿಂಚರಕಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು ಸಮಸ್ಯೆ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಶುಕ್ರವಾರ ಕರವೇ ಸಂಘಟನೆಯ ನೇತೃತ್ವದಲ್ಲಿ ಜಿಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಕುರಿತು ಜಿಪಂ ಸಿಇಒ ಜ್ಞಾನಪ್ರಕಾಶ್ ಅವರಿಗೆ ಕರವೇ ಜಿಲ್ಲಾಧ್ಯಕ್ಷ ವಿನೋದರೆಡ್ಡಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಗ್ರಾಮಸ್ಥರು, ಗ್ರಾಮದಲ್ಲಿ ಐದು ಸಾವಿರ ಜನಸಂಖ್ಯೆಯಿದ್ದು, ಅಷ್ಟೇ ಸಂಖ್ಯೆ ಜಾನುವಾರುಗಳಿವೆ. ಆದರೆ ಕಳೆದ ಕೆಲ ತಿಂಗಳಿನಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಅದರಿಂದ ಜನತೆ ತೊಂದರೆ ಎದುರಿಸುವಂತಾಗಿದೆ ಎಂದು ದೂರಿದರು. ಈ ಬಗ್ಗೆ ಗ್ರಾಪಂ, ತಾಪಂ ಅಧಿಕಾರಿಗಳಿಗೆ ಅನೇಕ ಸಂದರ್ಭದಲ್ಲಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಕಾರಣ ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಗ್ರಾಮಸ್ಥರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಜ್ಞಾನಪ್ರಕಾಶ್, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಬಸವರಾಜ್, ಚಂದ್ರಶೇಖರ್ ಹಾವುಕಾಯಿ, ಬಸವರಾಜಪ್ಪ ದಳಪತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.