ಗ್ರಾಮೀಣ ಕ್ಷೇತ್ರದಲ್ಲಿ ಸಮಸ್ಯೆಗಳ ಸರಮಾಲೆ; ಜೆಡಿಯು ಆರೋಪ
ರಾಯಚೂರು: ಗ್ರಾಮೀಣ ಭಾಗದಲ್ಲಿ ಸಮರ್ಪಕ ವಿದ್ಯುತ್, ಕುಡಿಯುವ ನೀರಿನ ಕೊರತೆಯಿಂದ ಜನತೆ ತೊಂದರೆಯಲ್ಲಿದ್ದಾರೆ. ಇದುವರೆಗೆ ಶಾಸಕರಾಗಿದ್ದವರ ನಿರ್ಲಕ್ಷ್ಯದಿಂದ ಜನತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ ಎಂದು ಜೆಡಿಯು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ವೀರನಗೌಡ ಅರಶಿಣಗಿ ಆರೋಪಿಸಿದರು.
ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದಲ್ಲಿ ಇದುವರೆಗೆ ಅಧಿಕಾರ ನಡೆಸಿದ ಎಲ್ಲರೂ ಅಭಿವೃದ್ಧಿ ನಿರ್ಲಕ್ಷ್ಯ ಮಾಡಿದ್ದರಿಂದ ಮತದಾರರು ಸಂಕಷ್ಟದಲ್ಲಿಯೇ ಬದುಕು ಕಳೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳು ಪರಿಹಾರಕ್ಕೆ ತಾವು ಕಣಕ್ಕಿಳಿದಿದ್ದಾಗಿ ಹೇಳಿದರು.
ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆಯಿದೆ. ನಿರಂತರ ವಿದ್ಯುತ್ ದೊರೆಯದೇ ರೈತರು ಪ್ರತಿ ವರ್ಷ ಬೆಳೆ ಹಾನಿ ಅನುಭವಿಸುವಂತಾಗಿದೆ. ಶುದ್ಧ ಕುಡಿಯುವ ನೀರು ದೊರೆಯದೇ ಜನತೆ ಆರೋಗ್ಯ ಹದಗೆಟ್ಟಿದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಶೌಚಾಲಯಗಳಿಲ್ಲದೇ ಕಷ್ಟ ಎದುರಿಸುತ್ತಿದ್ದಾರೆಂದು ಟೀಕಿಸಿದರು.
ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಕುಡಿಯುವ ನೀರು ಸೇರಿದಂತೆ ಬೆಳೆಗಳಿಗೂ ನೀರು ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಮರ್ಪಕ ಕುಡಿಯುವ ನೀರು ಒದಗಿಸುವುದು ತಮ್ಮ ಆಶಯವಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

