ರಾಯಚೂರು

ಮತದಾನ ಜಾಗೃತಿಗಾಗಿ ಬೀದಿ ನಾಟಕ

Published On :

ಕನ್ನಡಪ್ರಭ ವಾರ್ತೆ   ರಾಯಚೂರು   ಏ.19
ಜಿಲ್ಲೆಯಲ್ಲಿ  ಮೇ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಪ್ರಮಾಣ ಗರಿಷ್ಟ ಮಟ್ಟದಲ್ಲಿ ನಡೆಯುವಂತೆ ಮಾಡಲು  ಮತದಾರರಲ್ಲಿ ಮತದಾನ ಹಕ್ಕಿನ ಜಾಗೃತಿ ಮೂಡಿಸಲು ಜಿಲ್ಲೆಯ ಆಯ್ದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಏ.19ರಿಂದ ಮೇ 1 ರವರೆಗೆ ಬೀದಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಜಿಲ್ಲೆಯ ಎಲ್ಲ 7 ವಿಧಾನಸಭೆ ಕ್ಷೇತ್ರಗಳಲ್ಲಿ  ಈ ಹಿಂದೆ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿರುವುದರಿಂದ ಬೀದಿ ನಾಟಕ ಪ್ರದರ್ಶನಕ್ಕಾಗಿ ನಕಾಶೆ ತಯಾರಿಸಿದ್ದು, ಮತದಾರರು ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಡಿಂಗ್ರಿ ನರಸಪ್ಪ ಹಾಗೂ ಡಿಂಗ್ರಿ ನರೇಶ ನೀನಾಸಂ ನೇತೃತ್ವದ ತಂಡಗಳು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ಗೀತೆ, ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.