ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಹಿಂದಕ್ಕೆ
ರಾಯಚೂರು: ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಬಷೀರುದ್ದೀನ್ ಅವರು ಶನಿವಾರ ತಮ್ಮ ನಾಮಪತ್ರ ಹಿಂಪಡೆಯುವ ಮೂಲಕ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸೈಯದ್ ಯಾಸೀನ್ ಅವರಿಗೆ ಒದಗಿದ್ದ ಕಂಟಕ ನಿವಾರಣೆಯಾದಂತಾಗಿದೆ.
ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷನಿಂದ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಜಿಪಂ ಮಾಜಿ ಸದಸ್ಯ ಬಷೀರುದ್ದೀನ್ ಟಿಕೆಟ್ ಬಯಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಲಿ ಶಾಸಕ ಸೈಯದ್ ಯಾಸೀನ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡಿದ್ದ ಬಷೀರುದ್ದೀನ್ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದರು.
ಮನವೊಲಿಕೆ: ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರು ಬಷೀರುದ್ದೀನ್ ಮನವೊಲಿಕೆ ಕಾರ್ಯದಲ್ಲಿ ತೊಡಗಿದ್ದರು. ಅದರಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರು ಬಷೀರುದ್ದೀನ್ ಅವರೊಂದಿಗೆ ದೂರವಾಣಿಯಲ್ಲಿ ಮತ್ತು ಖುದ್ದಾಗಿ ಕರೆಯಿಸಿಕೊಂಡು ಸಮಾಲೋಚಿಸಿದ್ದರ ಫಲವಾಗಿ ಶನಿವಾರ ತಮ್ಮ ನಾಮಪತ್ರ ಹಿಂಪಡೆದಿದ್ದಾಗಿ ಬಷೀರುದ್ದೀನ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

