ಚನ್ನಳ್ಳಿ ಗ್ರಾಪಂನಲ್ಲಿ ಜಾಥಾ
ಸಿಂಧನೂರು: ಜಿಲ್ಲಾಡಳಿತದ ಆದೇಶದ ಮೇರೆಗೆ ಗ್ರಾಮ ಪಂಚಾಯಿತಿ ಚನ್ನಳ್ಳಿಯಲ್ಲಿ ಮತದಾನಕ್ಕಾಗಿ ಜಾಗೃತಿ ಕರೆಯನ್ನು ಜಾಥಾಮೂಲಕ ಹಮ್ಮಿಕೊಳ್ಳಲಾಗಿತ್ತು. ಪಿಡಿಒ ಅಮರೇಶ ಮಾತನಾಡಿ, ಎಲ್ಲಾ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ದಿನಾಂಕ 5.5.13 ರಂದು ತೆರಳಿ ಮತದಾನ ಮಾಡುವುದರ ಮೂಲಕ ನಮ್ಮ ಹಕ್ಕನ್ನು ಚಲಾಯಿಸಬೇಕು. ದೇಶದ ಸುಭದ್ರ ಭವಿಷ್ಯ ರೂಪಿಸಬೇಕು ಎಂದರು. ಈ ಜಾಗೃತಿ ಜಾಥಾದಲ್ಲಿ ಗೋರೆಬಾಳ ಸಿಆರ್‌ಪಿ ಮಲ್ಲಿಕಾರ್ಜುನ್ ಶಾಲಾ ಮುಖ್ಯಗುರುಗಳಾದ ತಿಪ್ಪಯ್ಯ, ತಿಮ್ಮಾರೆಡ್ಡಿ, ದುರಗಪ್ಪ, ರಾಮಣ್ಣ ಹಾಗೂ ಎಲ್ಲಾ ಸಹಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಶುವೈದ್ಯಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
24ರಂದು ಶಿಬಿರ
ರಾಯಚೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆ ಮತದಾರರ ಜಾಗೃತಿಗೆ ಏ. 24ರಂದು ರಂಗಮಂದಿರದಲ್ಲಿ ಶಿಬಿರ ಆಯೋಜಿಸಲಾಗಿದೆ. ನಗರದ ರಂಗಮಂದಿರದಲ್ಲಿ ಬೆಳಗ್ಗೆ 10ಕ್ಕೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ವತಿಯಿಂದ ನಡೆಯಲಿರುವ ಶಿಬಿರದಲ್ಲಿ ಸಾಕ್ಷರ ಭಾರತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಘ ಸಂಸ್ಥೆಗಳವರಿಗೆ ಶೇ. 100ರಷ್ಟು ಮತದಾನ ಮಾಡುವಂತೆ ಪ್ರೇರೇಪಿಸುವಂತೆ ಶಿಬಿರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಇಂದಿರಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

