ಶೀಘ್ರವೇ ಎಸ್ಸೆಂ ಕೃಷ್ಣ ಪ್ರಚಾರಕ್ಕೆ...
ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದಲ್ಲಿ ಶನಿವಾರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸಕ್ತ ಚುನಾವಣೆಯಲ್ಲಿ ಎಸ್.ಎಂ. ಕೃಷ್ಣ ಅವರು ಪ್ರಚಾರಕ್ಕೆ ಆಗಮಿಸುವ ಬಗ್ಗೆ ಎದ್ದಿರುವ ಗೊಂದಲಕ್ಕೆ ತೆರೆ ಎಳೆದ ಅವರು, ಶೀಘ್ರದಲ್ಲಿಯೇ ಕೃಷ್ಣ ಅವರು ಪ್ರಚಾರ ಕೈಗೊಳ್ಳಲಿದ್ದಾರೆಂದು ಹೇಳಿದರು.
ವರಿಷ್ಠರ ಸೂಚನೆಯಂತೆ ಮುನ್ನಡೆವೆವು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಪಕ್ಷದ ಮೊದಲಾದ್ಯತೆಯಾಗಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಿದೆ. ಸದ್ಯಕ್ಕೆ ಸಿಎಂ ಹುದ್ದೆಯ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ವರಿಷ್ಠರ ಸೂಚನೆಯಂತೆ ತಾವು ಮುನ್ನಡೆಯುವುದಾಗಿ ಅವರು ತಿಳಿಸಿದರು.
ಸಿಎಂ ಹುದ್ದೆಗಾಗಿ ಪಕ್ಷದಲ್ಲಿ ಪೈಪೋಟಿಯಿಲ್ಲ ಎಂದು ತಿಳಿಸಿದರು.
ಅಸಮಾಧಾನ ಸಹಜ: ಪಕ್ಷದಲ್ಲಿ ಟಿಕೆಟ್ ಹಂಚಿಕೆಯಿಂದ ಉಂಟಾಗಿರುವ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಹಜವಾಗಿಯೇ ಈ ಬಾರಿಯ ಚುನಾವಣೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿತ್ತು. ಅದರಿಂದಾಗಿ ಟಿಕೆಟ್ ದೊರೆಯದೇ ಹೋದಾಗ ಅಸಮಾಧಾನ ಮೂಡುವುದು ಸಹಜ. ಟಿಕೆಟ್ ವಂಚಿತರು ಟಿಕೆಟ್ ಮಾರಾಟಕ್ಕಿರಿಸಲಾಗಿತ್ತು ಎಂಬ ಆರೋಪ ಮಾಡುವುದು ಅಷ್ಟೇ ಸಹಜ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

