ರಾಯಚೂರು

ಸಂಹಿತೆ ಉಲ್ಲಂಘನೆ: 41 ಪ್ರಕರಣ ದಾಖಲು

Published On :

ರಾಯಚೂರು: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು 41 ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಮದ್ಯಕ್ಕೆ ಸಂಬಂಧಿಸಿದ 48 ಪ್ರಕರಣ ಹಾಗೂ ದಾಖಲೆಗಳಿಲ್ಲದ ಹಣ ಸಾಗಣೆಯ 11 ಪ್ರಕರಣ ದಾಖಲಿಸಲಾಗಿದೆ.
ನಗರದಲ್ಲಿ ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರು, ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು 41 ಪ್ರಕರಣ ದಾಖಲಾಗಿವೆ. ಅತೀ ಹೆಚ್ಚು ಲಿಂಗಸ್ಗೂರು ಕ್ಷೇತ್ರದಲ್ಲಿ 11 ಪ್ರಕರಣ ದಾಖಲಾಗಿವೆ ಎಂದು ತಿಳಿಸಿದರು.
ಅದೇ ರೀತಿ ಅಕ್ರಮ ಮದ್ಯ ಸಾಗಣೆ ಮತ್ತು ಸಂಗ್ರಹಣೆ ಮೇಲೆ ದಾಳಿ ನಡೆಸಿ ಒಟ್ಟು 48 ಕೇಸ್‌ಗಳಲ್ಲಿ ಒಂದು ಸಾವಿರ ವಿವಿಧ ಕಂಪನಿಗಳ ಮದ್ಯ ಹಾಗೂ 1,630 ಕೇಸ್ ಇತರೆ ಮದ್ಯವನ್ನು ಜಪ್ತಿ ಮಾಡಿದ್ದು, ಇದರ ಬೆಲೆ 9,35,403 ಆಗಿದೆ. ಈ ಕುರಿತಂತೆ 28 ಜನರನ್ನು ಈ ಕುರಿತು ಬಂಧಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ವಿವಿಧೆಡೆ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ವೇಳೆ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 11 ಪ್ರಕರಣಗಳಲ್ಲಿ 39,17,700 ಪತ್ತೆಯಾಗಿದೆ. ಈ ಕುರಿತು 39 ಜನರನ್ನು ಬಂಧಿಸಲಾಗಿದೆ. ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.