ಚುನಾವಣೆ ತರಬೇತಿಗೆ ಚಾಲನೆ
ರಾಯಚೂರು: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯನ್ನು ಶಾಂತಿಯುತ ಮತ್ತು ಸುಗಮವಾಗಿ ನಿರ್ವಹಿಸುವಲ್ಲಿ ಚುನಾವಣೆಯ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ನಿಯೋಜಿತ ಸಿಬ್ಬಂದಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಕರೆ ನೀಡಿದರು. ನಗರದಲ್ಲಿ ಭಾನುವಾರ ರಂಗಮಂದಿರದಲ್ಲಿ ಜಿಲ್ಲಾಡಳಿದಿಂದ ಆಯೋಜಿಸಿದ್ದ ಚುನಾವಣೆ ಸಿಬ್ಬಂದಿಯ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಜಿಲ್ಲೆಯಲ್ಲಿ ಚುನಾವಣೆ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಬ್ಬಂದಿಯು ಅಗತ್ಯ ಮಾಹಿತಿ ಪಡೆಯಲು ಮೇಲಧಿಕಾರಿಗಳನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಯಚೂರು ನಗರ ಮತ್ತು ಗ್ರಾಮೀಣ ಕ್ಷೇತ್ರದ ಚುನಾವಣೆಯ ನಿಯೋಜಿತ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ತರಬೇತಿ ಸಮಾರಂಭದಲ್ಲಿ ಸಹಾಯಕ ಆಯುಕ್ತೆ ಮಂಜುಶ್ರೀ, ಜಿಪಂ ಉಪಕಾರ್ಯದರ್ಶಿ ಎಂ.ಡಿ.ಯುಸೂಫ್, ಜಿಪಂ ಯೋಜನಾಧಿಕಾರಿ ಡಾ. ಟಿ. ರೋಣಿ ಸೇರಿದಂತೆ ಅನೇಕರಿದ್ದರು.
ಗುರುತಿನ ಚೀಟಿ: ಜಿಲ್ಲಾಡಳಿತ ಸ್ಪಷ್ಟನೆ
ರಾಯಚೂರು: ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ಚುನಾವಣೆಯ ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿ ಹೊಂದಿರುವ ಮತದಾರರು ಕಡ್ಡಾಯವಾಗಿ ಆ ಗುರುತಿನ ಚೀಟಿಯೊಂದಿಗೆ ಮತದಾನಕ್ಕೆ ಆಗಮಿಸಬೇಕು. ಗುರುತಿನ ಚೀಟಿ ಹೊಂದಿಲ್ಲದವರು ಮಾತ್ರ ಚುನಾವಣೆ ಆಯೋಗ ಸೂಚಿಸಿದ 23 ದಾಖಲೆಗಳಲ್ಲಿ ಯಾವುದಾದರೊಂದನ್ನು ಬಳಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಈ ಕುರಿತು ಸ್ಪಷ್ಟಪಡಿಸಿರುವ ಜಿಲ್ಲಾಡಳಿತವು ಈಗಾಗಲೇ ಜಿಲ್ಲೆಯಲ್ಲಿ ಶೇ.98 ರಷ್ಟು ಮತದಾರರಿಗೆ ಮತದಾರರ ಗುರುತಿನ ಚೀಟಿ ನೀಡಲಾಗಿದೆ. ಈ ಚೀಟಿ ಪಡೆದ ಎಲ್ಲ ಮತದಾರರು ಗುರುತಿನ ಚೀಟಿಯನ್ನೇ ಕಡ್ಡಾಯವಾಗಿ ಮತದಾನದ ವೇಳೆ ಪ್ರದರ್ಶಿಸಬೇಕು. ಇನ್ನುಳಿದವರು ಚುನಾವಣೆಯ ಆಯೋಗವು ಸೂಚಿಸಿದ 23ದಾಖಲೆಗಳನ್ನು ಪ್ರದರ್ಶಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ತಿಳಿಸಿದ್ದಾರೆ.
ಪೊಲೀಸ್ ವೀಕ್ಷಕರ ನೇಮಕ
ರಾಯಚೂರು: ಕೇಂದ್ರ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣೆಯ ಪೊಲೀಸ್ ವೀಕ್ಷಕರಾಗಿ ಹರಿಯಾಣ ರಾಜ್ಯದ ಪೊಲೀಸ್ ಮಹಾನಿರೀಕ್ಷಕ ಸತ್ ಪ್ರಕಾಶ್ ರಂಗಾ ಅವರನ್ನು ನೇಮಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಎಸ್ಪಿ ಕಚೇರಿಯು, ಜಿಲ್ಲಾ ಪೊಲೀಸ್ ಕಚೇರಿಯ ಅವರಣದಲ್ಲಿರುವ ದೋ ಅಬ್ ಅತಿಥಿ ಗೃಹದಲ್ಲಿ ಈ ಅಧಿಕಾರಿ ತಂಗಿದ್ದು, ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ದಿನವೂ ಸಂಜೆ 4 ರಿಂದ 6 ಗಂಟೆಯವರೆಗೆ ಸಂಪರ್ಕಿಸಬಹುದಾಗಿದೆ. ಅದೇ ರೀತಿ ಇವರನ್ನು ಮೊಬೈಲ್ ಸಂಖ್ಯೆ - 094160 48555 ಇಲ್ಲಿಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

