ಹೆಂಡ ಮಾರಾಟ: ಮಹಿಳೆ ಬಂಧನ
ರಾಯಚೂರು: ಇಲ್ಲಿನ ಆಶೋಕ ನಗರದಲ್ಲಿ ಅನಧಿಕೃತವಾಗಿ ಹೆಂಡ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಬಂಧಿತಳನ್ನು ಮಾರೆಮ್ಮ ಎಂದು ಗುರುತಿಸಲಾಗಿದೆ. ಈಕೆ ತನ್ನ ಮನೆಯ ಮುಂದೆ ಹೆಂಡ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಮಹಿಳೆಯನ್ನು ಬಂಧಿಸಿ ಆಕೆಯಿಂದ 60 ಲೀಟರ್ ಹೆಂಡ ಮತ್ತು ನಗದು ರು. 250 ಜಪ್ತಿ ಮಾಡಲಾಗಿದೆ. ಕುರಿತು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.
ಸೇಂದಿ ಮಾರಾಟ: ಒಬ್ಬನ ಬಂಧನ
ರಾಯಚೂರು: ತಾಲೂಕಿನ ಚಿಕ್ಕಸೂಗೂರು ಗ್ರಾಮದಲ್ಲಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗ್ರಾಮದ ಮನೆಯ ಮುಂದೆ ನರಸಪ್ಪ ಎಂಬಾತ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಅವನಿಂದ 15ಲೀಟರ್ ಸೇಂದಿ ಮತ್ತು ನಗದು ರು. 50ಜಪ್ತಿ ಮಾಡಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.
ಜಾಲಹಳ್ಳಿ; ಅಕ್ರಮ ಮದ್ಯ ಜಪ್ತಿ
ರಾಯಚೂರು: ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮದ್ಯ ಸಾಗಿಸುತ್ತಿದ್ದ ವಾಹನದಲ್ಲಿದ್ದವರು ಪೊಲೀಸರಿಂದ ತಪ್ಪಿಸಿಕೊಂಡಿದ್ದು ಮದ್ಯ ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಾಲಹಳ್ಳಿ ಗ್ರಾಮದ ಬಸವೇಶ್ವರ ಸರ್ಕಲ್ ಬಿಜೆಪಿ ಕಾರ್ಯಕರ್ತರಾದ ನಿಂಗಯ್ಯ ಸುಣ್ಣದಕಲ್, ವೆಂಕೊಬ ಅರಕೇರಾ, ನಾಗರಾಜ್ ಅರಕೇರಾ, ಸೀತಾರಾಂ ಬಿ.ಗಣೇಕಲ್, ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಕ್ರೂಸರ್ ವಾಹನದಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿ6736 ಬೆಲೆಯ ಮದ್ಯ ಹಾಗೂ ವಾಹನ ಜಪ್ತಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಜಾಲಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅಕ್ರಮ ಮದ್ಯ ಸಂಗ್ರಹ ಪತ್ತೆ
ರಾಯಚೂರು: ಲಿಂಗಸ್ಗೂರು ನಗರದ ಹೊರವಲಯದ ಮುದಗಲ್ ರಸ್ತೆಯಲ್ಲಿ ಅಕ್ರಮವಾಗಿ ಪೊದೆಯಲ್ಲಿ ಸಂಗ್ರಹಿಸಿಟ್ಟಿದ್ದ 64 ಬಾಕ್ಸ್ ಮದ್ಯವನ್ನು ಜಪ್ತಿ ಮಾಡಲಾಗಿದೆ. ುದ್ಯದ ಅಕ್ರಮ ಸಂಗ್ರಹಣೆಯ ಮಾಹಿತಿ ಪಡೆದ ಲಿಂಗಸ್ಗೂರು ಪೊಲೀಸರು ತಪಾಸಣೆ ನಡೆಸಿದ್ದು ಮತದಾರರಿಗೆ ಚುನಾವಣೆ ವೇಳೆ ಹಂಚಿಕೆ ಮಾಡಲು ಪೊದೆಯಲ್ಲಿ ಅಡಗಿಸಿಟ್ಟಿದ್ದ 64 ಬಾಕ್ಸ್ ವಿವಿಧ ಕಂಪನಿಗಳ ಮದ್ಯ ಜಪ್ತಿ ಮಾಡಲಾಗಿದೆ. ಕುರಿತು ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

