ರಾಯಚೂರು

ಗೂಡಂಗಡಿಗಳ ತೆರವಿಗೆ ಕ್ರಮ

Published On :

ಸಿಂಧನೂರು: ರಸ್ತೆ ಬದಿಯಲ್ಲಿ ಇಟ್ಟುಕೊಂಡಿರುವ ಡಬ್ಬಾ ಅಂಗಡಿ ಮತ್ತು ಅತಿಕ್ರಮಿಸಿಕೊಂಡಿರುವ ಜಾಗವನ್ನು ತೆರವುಗೊಳಿಸಲು ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ತಹಸೀಲ್ದಾರ್ ಕಚೇರಿ, ಆಸ್ಪತ್ರೆ, ಕೋರ್ಟ್ ಮುಂಭಾಗದಲ್ಲಿರುವ ಚಹಾ ಅಂಗಡಿ, ಎಳನೀರು ಅಂಗಡಿ, ಕಬ್ಬಿನ ಹಾಲು ಬಂಡಿ ಮತ್ತಿತರ ಸಣ್ಣಪುಟ್ಟ ವ್ಯಾಪಾರಿಗಳನ್ನು ತೆರವುಗೊಳಿಸಿದ್ದು ಇನ್ನು ನಗರದ ಎಲ್ಲ ಮುಖ್ಯರಸ್ತೆಗಳನ್ನು ಆವರಿಸಿಕೊಂಡಿರುವ ಅನಧಿಕೃತ ಅಂಗಡಿಗಳನ್ನು ಎತ್ತಂಗಡಿ ಮಾಡುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ನಿರ್ಧರಿಸಿರುವುದಾಗಿ ತಿಳಿಸಿದರು. ರಸ್ತೆಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿರುವ ಕಟ್ಟಡಗಳನ್ನು ಸಹ ಸರ್ಕಾರದ ಅನುಮತಿಯ ಮೇರೆಗೆ ತೆರವುಗೊಳಿಸಲು ಸಂಕಲ್ಪ ಮಾಡಿದ್ದು, ಸಾರ್ವಜನಿಕರು ಸಹಕರಿಸುತ್ತಾರೆನ್ನುವ ನಂಬಿಕೆ ಇದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.