ರಾಯಚೂರು

ನಾಳೆ ಮತದಾನ ಜಾಗೃತಿ ಕಾರ್ಯಕ್ರಮ

Published On :

ರಾಯಚೂರು: ನಗರದ ಸಿದ್ದರಾಮ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಇವರ  ಸಂಯುಕ್ತಾಶ್ರಯದಲ್ಲಿ ಏ.24ರಂದು ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಸಾಕ್ಷರತಾ ಭಾರತ್ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಕರು, ನವ ಸಾಕ್ಷರರು ಹಾಗೂ ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂಘ-ಸಂಸ್ಥೆಗಳವರು ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸುವ ಕಾರ್ಯಕರ್ತರು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶೇ.100ರಷ್ಟು ಮತದಾನವಾಗುವಂತೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಇಂದಿರಾ ಮನವಿ ಮಾಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.