ಮಕ್ಕಳಲ್ಲಿ ಆದರ್ಶ ಮೌಲ್ಯ ಬಿತ್ತಲು ಸಲಹೆ
ಸುರಪುರ: ಇಂದಿನ ಮಕ್ಕಳೇ ನಾಳಿನ ಉತ್ತಮ ಪ್ರಜೆಗಳು. ದೇಶದ ಒಳ್ಳೆಯ ನಾಗರಿಕರನ್ನಾಗಿ ರೂಪಿಸುವ ಗುರುತರವಾದ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಈ ನಿಟ್ಟಿನಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಅವರಲ್ಲಿ ಆದರ್ಶ ಮೌಲ್ಯಗಳನ್ನು ಬಿತ್ತಬೇಕು ಎಂದು ಉದ್ಯಮಿ ಕಿಶೋರಚಂದ್ ಜೈನ್ ಸಲಹೆ ನೀಡಿದರು. ಸಮೀಪದ ರಂಗಂಪೇಟೆಯ ಯರಸಂ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ವಾರ್ಷಿಕ ಸ್ನೇಹಸಮ್ಮೇಳನ ಉದ್ಘಾಟಿಸಿ, ಭವಿಷ್ಯದಲ್ಲಿ ಉತ್ತಮ ಫಲಿತಾಂಶ ಮತ್ತು ಉನ್ನತ ಹುದ್ದೆಗಳನ್ನು ಪಡೆಯಬೇಕಾದರೆ ನಿರಂತರ ಶ್ರಮ ಅಗತ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಲ್ಲಿ ಓದಿನ ಹವ್ಯಾಸ ಬೆಳೆಸಬೇಕು ಎಂದರು.
ವಿದ್ಯಾರ್ಥಿಗಳು ಕೂಡಾ ತಂದೆ-ತಾಯಿಯಂದಿರನ್ನು ಮತ್ತು ಕಲಿಸಿದ ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಹಿರಿಯರ ಆಶೀರ್ವಾದದ ಬಲದಿಂದ ಗುರಿ ತಲಪಲು ಸಾಧ್ಯ ಎಂದು ಹೇಳಿದರು. ಸಂಸ್ಥೆ ಅಧ್ಯಕ್ಷ ಬಸವರಾಜ ಯರಸಂ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹ್ಮದ ಸಲೀಂ ವರ್ತಿ, ಪುರಸಭೆ ಸದಸ್ಯ ಖಾಲೀದ ಅಹ್ಮದ ತಾಳಿಕೋಟಿ. ಅಬ್ದುಲ್ ಅಲೀಂ ಗೋಗಿ, ಚಾಂದ್ ಪಟೇಲ್ ಮಕ್ತಾಪುರ, ಜೈನುದ್ದೀನ್ ಉಸ್ತಾದ, ಎಕ್ಬಾಲ್ ಭೋಡೆ, ಪ್ರಭಾಕರ , ಚಂದ್ರಕಾಂತ, ನಿಂಗಣ್ಣ ಇದ್ದರು. ಲಕ್ಷ್ಮಿ ಸ್ವಾಗತಿಸಿದರು. ಪ್ರಕಾಶ ನಿರೂಪಿಸಿದರು. ಸೀಮಾರಾಣಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

