ಅಕ್ರಮ ಮದ್ಯ: ಒಬ್ಬನ ಬಂಧನ
ರಾಯಚೂರು: ತಾಲೂಕಿನ ಕಡಗಂದೊಡ್ಡಿ ಗ್ರಾಮದ ಕ್ರಾಸ್ ಬಳಿ ಅಕ್ರಮ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ರಾಮಪ್ಪ ಎಂದು ಗುರುತಿಸಲಾಗಿದೆ. ಈತ ಬೈಕ್‌ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ತಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 4,195 ಬೆಲೆಯ ವಿವಿಧ ಕಂಪನಿಯ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ಮತದಾರರಿಗೆ ಹಣ ಹಂಚಿಕೆ; ಬಂಧನ
ರಾಯಚೂರು: ಇಲ್ಲಿನ ನೇತಾಜಿ ನಗರದ ವ್ಯಾಪ್ತಿಯಲ್ಲಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಮತ ಹಾಕಲು ಹಣದ ಆಮಿಷವೊಡ್ಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಾರಾಮ್ ಎಂದು ಗುರುತಿಸಲಾಗಿದೆ. ಈತ ಆಂಜನೇಯ ದೇವಸ್ಥಾನದ ಬಳಿ ಮತದಾರರಿಗೆ ಹಣ ಹಂಚುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು, ಆರೋಪಿಯಿಂದ ನಗದು 6,500 ಜಪ್ತಿ ಮಾಡಿದ್ದಾರೆ. ಈ ಕುರಿತು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಮದ್ಯ ಮಾರಾಟ; ಸೆರೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಭೋಜಪ್ಪ ಎಂದು ಗುರುತಿಸಲಾಗಿದೆ. ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿವಿಧ ಕಂಪನಿಗಳ 2,670 ಮದ್ಯವನ್ನು ಜಪ್ತಿ ಮಾಡಲಾಗಿದೆ. ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲು ಬಿದ್ದು ಮಹಿಳೆ ಸಾವು
ರಾಯಚೂರು: ದೇವದುರ್ಗ ತಾಲೂಕಿನ ನಿಲುವಂಜಿ ಗ್ರಾಮದ ಮಹಿಳೆಯೊಬ್ಬಳ ಮೇಲೆ ಕಲ್ಲು ಬಿದ್ದು ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾಳೆ. ಮೃತಳನ್ನು ಅಕ್ಕಮ್ಮ ಎಂದು ಗುರುತಿಸಲಾಗಿದೆ. ಈಕೆ ಮನೆಯ ಮುಂದಿನ ಕಲ್ಲುಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಲ್ಲುಗಳು ಆಕೆಯ ಕಾಲಿನ ಮೇಲೆ ಮತ್ತು ಮೈಮೇಲೆ ಬಿದ್ದಿದ್ದರಿಂದ ಆಕೆ ತೀವ್ರ ಗಾಯಗೊಂಡಾಗ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲಾರಿಗೆ ಡಿಕ್ಕಿ: ಮೂವರ ಸಾವು
ರಾಯಚೂರು: ಮಾನವಿ ತಾಲೂಕಿನ ಸೀಕಲ್ ಕ್ರಾಸ್ ಬಳಿ ಮಂಗಳವಾರ ರಾತ್ರಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಅದರಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ವೀರೇಶ್, ಈರಮ್ಮ ಮತ್ತು ಶಂಕ್ರಮ್ಮ ಎಂದು ಗುರುತಿಸಲಾಗಿದೆ. ಟಾಟಾ ಏಸ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ರಸ್ತೆ ಬದಿ ನಿಂತಿದ್ದ ಲಾರಿಗೆ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನುಳಿದಂತೆ ಐವರು ಗಾಯಗೊಂಡಿದ್ದು, ಟಾಟಾ ಏಸ್ ಚಾಲಕ ಬಾಷಾ ಪರಿಸ್ಥಿತಿ ಗಂಭೀರವಾಗಿದ್ದು, ಮಾನವಿ ಆಸ್ಪತ್ರೆಗೆ ಸೇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

