ಗುಲ್ಬರ್ಗ; ನೀತಿ ಸಂಹಿತೆ- 21 ಪ್ರಕರಣ
ಗುಲ್ಬರ್ಗ: ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ ಮೇ 5ರಂದು ನಡೆಯುವ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಏ. 5 ರಿಂದ 22ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು 21 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಏ. 22ರಂದು ಕೆಳಕಂಡ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.
ಗುಲ್ಬರ್ಗ ಉತ್ತರ ಮತಕ್ಷೇತ್ರದಲ್ಲಿ ಕೆಜೆಪಿ ಪಕ್ಷದ ಅಭ್ಯರ್ಥಿಯಿಂದ ಪರವಾನಿಗೆ ಇಲ್ಲದೆ ಚುನಾವಣಾ ಪ್ರಚಾರ ಮಾಡಿದ ಮತ್ತು ರಾತ್ರಿ 10 ಗಂಟೆಯ ನಂತರ ಚುನಾವಣೆ ಪ್ರಚಾರ ಮಾಡಿದ ಬಗ್ಗೆ ಗುಲ್ಬರ್ಗ ರೋಜಾ ಪೊಲೀಸ್ ಠಾಣೆಯಲ್ಲಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. ಗುಲ್ಬರ್ಗ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ವಾಹನದಲ್ಲಿ ನಗದು ಹಣದ ಸಾಗಾಣಿಕೆ ಬಗ್ಗೆ ಸಿಕ್ಕ ಸುಳಿವಿನ ಮೇರೆಗೆ ರು. 1,13,800 ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಹಣವನ್ನು ಗುಲ್ಬರ್ಗ ತಹಶೀಲ್ದಾರರಿಗೆ ಒಪ್ಪಿಸಲಾಗಿದೆ. ಪ್ರಕರಣವನ್ನು ಪರಿಶೀಲನೆ ನಂತರ ದಾಖಲಿಸಲಾಗುವುದು.
ಬಿಎಸ್ಸಾರ್ಗೆ ನೇಮಕ
ಸಿಂಧನೂರು: ಸಿಂಧನೂರು ತಾಲೂಕು ಎಸ್ಟಿ ಯುವ ಘಟಕದ ಅಧ್ಯಕ್ಷರನ್ನಾಗಿ ಯಮನೂರು ನಾಯಕ ಮುಳ್ಳೂರು ಅವರನ್ನು ನೇಮಿಸಿ ಜಿಲ್ಲಾ ಸಂಚಾಲಕರಾದ ಸಯ್ಯದ್ ಮಿಟ್ಟಿಮನಿ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಪಕ್ಷದ ಸಂಘಟನೆಯಲ್ಲಿ ತೊಡಗುವಂತೆ ಹಾಗೂ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಕ್ರೀಯವಾಗುವಂತೆ ಎಂದು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

