3 ನೀತಿ ಸಂಹಿತೆ ಪ್ರಕರಣ ದಾಖಲು
ರಾಯಚೂರು: ಸಿಂಧನೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣೆ ಪ್ರಚಾರ ಸಭೆಯ ವೇಳೆ ಅವರಿಗೆ ಬಹಿರಂಗವಾಗಿ ಸಿಂಧನೂರು ಕಾಂಗ್ರೆಸ್ ಅಭ್ಯರ್ಥಿ ಬೆಳ್ಳಿ ಗದೆ ಕೊಡುಗೆ ನೀಡಿದ್ದು ಸೇರಿ ಒಟ್ಟು ಮೂರು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಿಂಧನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಂಪನಗೌಡ ಬಾದರ್ಲಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಚಾರ ಸಭೆಯಲ್ಲಿಯೇ ಬೆಳ್ಳಿ ಗದೆ ಮತ್ತು ಕಿರೀಟ ನೀಡಿದ್ದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅದೇ ರೀತಿ ಎರಡು ವಾಹನಗಳನ್ನು ಪರವಾನಗಿಯಿಲ್ಲದೇ ಬಳಸಿದ್ದು ಹಾಗೂ ಸಿಂಧನೂರಿನಲ್ಲಿ ಬ್ಯಾನರ್, ಬಂಟಿಂಗ್ಸ್ ಅಳವಡಿಸಿದ್ದಕ್ಕೆ ಚುನಾವಣಾಧಿಕಾರಿಗಳು ನೀತಿ ಸಂಹಿತೆಯ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ೆ.
ಮಸ್ಕಿ; ಅನೇಕರು ಬಿಜೆಪಿಗೆ ಸೇರ್ಪಡೆ
ಮಸ್ಕಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಬಿಜೆಪಿ ಮುಖಂಡ ಆರ್.ಕೆ. ಹಿರೇಮಠ, ಮಸ್ಕಿ ಬಿಜೆಪಿ ಬ್ಲಾಕ್ ಅಧ್ಯಕ್ಷ ಮಲ್ಲಪ್ಪ ಚಿತ್ತಾಪುರ, ಅಭ್ಯರ್ಥಿ ಶಂಕರ ಮ್ಯಾದಾರ್ ಮಾತನಾಡಿದರು. ಆದಪ್ಪ ಮೇದಾರ, ರಾಜಣ್ಣ ಸಿಂಧನೂರು, ಎಂ.ಜಿ. ಹುಲಗಪ್ಪ, ಎಸ್. ಹುಲಗಪ್ಪ, ಮಂಜುನಾಥ ಜೋಷಿ, ರಾಜುಗೌಡ ಭೂತಲದಿನ್ನಿ, ಮಲ್ಲಣ್ಣ ಗೇಡಿ, ರುದ್ರಗೌಡ ಕೊಂಡಿ, ಹನುಮೇಶ ಮಿಲಿಟರಿ, ದಾವಲಸಾಬ ಹಣಗಿ ಇದ್ದರು.
ಅಂಬೇಡ್ಕರ್ ಜಯಂತಿ ಆಚರಣೆ
ರಾಯಚೂರು: ತಾಲೂಕಿನ ಸಗಮಕುಂಟಾ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮದ ಅಂಬೇಡ್ಕರ್ ಯುವಕ ಸಂಘದಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಅಂಬೇಡ್ಕರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವಕ ಸಂಘಧ ಅಧ್ಯಕ್ಷ ಮಲ್ಲೇಶ್ ಮಾತನಾಡಿದರು. ಸಂಘದ ಸದಸ್ಯರಾದ ಶ್ರೀನಿವಾಸ್, ಚಾಂದ್ಪಾಷಾ, ಲಕ್ಷ್ಮಣ, ಬಾಬು, ನರಸನಗೌಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

