ಶೇ.100 ಮತದಾನಕ್ಕಾಗಿ ಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಏ.24
ಮೇ 5ರಂದು ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಶೇ.100ರಷ್ಟು ಮತದಾನಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕಟಿಬದ್ಧರಾಗಿರಬೇಕೆಂದು ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.
ತಾಲೂಕಾಡಳಿತ, ಆರೋಗ್ಯ ಇಲಾಖೆ, ತಾಪಂ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರ ಪಾಲ್ಗೊಳ್ಳುವಿಕೆಗೆ ಅಗತ್ಯ. ಪ್ರತಿಯೊಬ್ಬರು ಮೇ 5ರಂದು ತಪ್ಪದೇ ಮತದಾನ ಮಾಡಬೇಕೆಂದು ಹೇಳಿದರು.
ತಾಪಂ ಇಒ ರಮೇಶ ತಳವಾರ ಮಾತನಾಡಿ, ಪ್ರತಿಯೊಬ್ಬ ನಾಗರಿಕರು ತಮ್ಮ ಅಮೂಲ್ಯವಾದ ಮತ ಚಲಾಯಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ಸೈಯದ್ ಹಸನ್ ಹುಸೇನಿ ಮಾತನಾಡಿ, ಜನರ ತೀರ್ಪು ಅಂತಿಮವಾಗಿದ್ದು ಮತದಾನ ದಿನ ತಪ್ಪದೇ ಮತ ಚಲಾಯಿಸಿ ಎಂಬ ಘೋಷಣೆಯನ್ನು ತಿಳಿಸಲು ಹಾಗೂ ಮತದಾನ ಕುರಿತು ಗ್ರಾಪಂ ಮಟ್ಟದಲ್ಲಿ ಜರಗುವ ಜಾಗೃತಿ ಜಾಥಾದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ತಪ್ಪದೇ ಭಾಗವಹಿಸಿ. ಅಲ್ಲದೆ ಮನೆಮನೆಗೆ ಭೇಟಿ ನೀಡಿ ತಿಳಿ ಹೇಳಬೇಕೆಂದು ಸಲಹೆ ನೀಡಿದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಕರವೀರಪ್ರಭು ಕ್ಯಾಲಕೊಂಡ, ಮತದಾನ ಪ್ರತಿ ನಾಗರಿಕನ ಕರ್ತವ್ಯ, ಧ್ವನಿ, ಹಕ್ಕು, ಆಯ್ಕೆಯಾಗಿರುವುದರಿಂದ ಎಲ್ಲರೂ ಮತದಾನ ಮಾಡಬೇಕೆಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ವಿದ್ಯಾಶ್ರೀ, ಡಾ. ಅಯ್ಯನಗೌಡ, ಡಾ. ಮಂಜುನಾಥ ಅಣ್ಣಗೌಡರ, ಡಾ. ಭಾಗೀರಥಿ ಡಾ. ಬಸವರಾಜ ಅಂಗಡಿ, ಡಾ. ಬಸವರಾಜ ವಿ., ಡಾ. ವಿರುಪಾಕ್ಷಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಬಿಪಿಎಂ ದಿಪಕ್ ಗಾಡವಿ, ಪಿ.ವೆಂಕಟೇಶ, ಎ.ಐ. ಪಾಟೀಲ, ಅಂದಾನಪ್ಪ, ಸುದರ್ಶನ, ಮಲ್ಲಿಕಾರ್ಜುನ, ರಂಗನಾಥ, ವೀರಣ್ಣ ಸೇರಿದಂತೆ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆಗಮಿಸಿದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಆಸ್ಪತ್ರೆಯಿಂದ ಆರಂಭವಾದ ಜಾಥಾ ನಗರದ ರಾಯಚೂರ ರಸ್ತೆ, ಕೋರ್ಟ್ ಸರ್ಕಲ್, ಕುಷ್ಟಗಿ ರಸ್ತೆ, ಬಸವೇಶ್ವರ ಸರ್ಕಲ್, ಹಳೆ ಬಜಾರ್, ಗೋಡೆ ಕಟ್ಟುವವರ ಓಣಿ, ಜನತಾ ಬಜಾರ್ ಮೂಲಕ ತೆರಳಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

