ರಾಯಚೂರು

ಅಕ್ರಮ ಮದ್ಯ; ವ್ಯಕ್ತಿ ಬಂಧನ

Published On :

ರಾಯಚೂರು: ಲಿಂಗಸ್ಗೂರು ತಾಲೂಕಿನ ಕಸಬಾ ಲಿಂಗಸ್ಗೂರು ಗ್ರಾಮದಲ್ಲಿ ಮತದಾರರಿಗೆ ಅಕ್ರಮವಾಗಿ ಮದ್ಯ ಹಂಚುವ ಉದ್ದೇಶದಿಂದ ಸಾಗಿಸುತ್ತಿದ್ದ ಮದ್ಯ ಜಪ್ತಿ ಮಾಡಲಾಗಿದೆ.
   ಗ್ರಾಮದಲ್ಲಿ ಬೀರಪ್ಪ ಎಂಬಾತ ಮದ್ಯ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಒಟ್ಟು 34,444 ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಲಿಂಗಸ್ಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು


ದೇವದುರ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಎಸ್. ಪಾಟೀಲ್ ಒತ್ತಾಯಿಸಿದ್ದಾರೆ. ಅವರು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಚುನಾವಣಾ ನೀತಿ ಸಂಹಿತೆ  ಜಾರಿಯಲ್ಲಿದ್ದರೂ ಕಾಂಗ್ರೆಸ್ ಮತ್ತು ಆ ಪಕ್ಷದ ಅಭ್ಯರ್ಥಿಗಳು ಧಾರ್ಮಿಕ ಅಲ್ಪಸಂಖ್ಯಾತರ ಮನೋಭಾವನೆಗೆ ಪ್ರಚೋದಿಸುವ ರೀತಿಯಲ್ಲಿ ಹಾಗೂ ಧಾರ್ಮಿಕ ಸ್ಥಳಗಳ ಭಾವಚಿತ್ರ ಬಳಸಿ ಅದರಲ್ಲಿ ಕೈ ಪಕ್ಷಕ್ಕೆ ಬೆಂಬಲಿಸಲು ಮನವಿ ಮಾಡುತ್ತಿದೆ ಎಂದು ದೂರಿದ್ದಾರೆ. ಕರಪತ್ರದಲ್ಲಿ ಮುದ್ರಕರ ಹೆಸರು ಹಾಗೂ ಮುದ್ರಣಕ್ಕೆ ನೀಡಿದವರ ಹೆಸರು ಸಹ ಪ್ರಕಟಿಸಿಲ್ಲ. ಇದು ಸ್ಷಷ್ಟವಾಗಿ  ನೀತಿ ಸಂಹಿತೆಯ ಉಲ್ಲಂಘನೆಯ ಪ್ರಕರಣವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.