ಕ್ಷೇತ್ರದ ನಿರ್ಲಕ್ಷ್ಯ, ಪ್ರಗತಿ ಕುಂಠಿತ
ರಾಯಚೂರು: ರಾಯಚೂರು ನಗರ ಕ್ಷೇತ್ರಕ್ಕೆ ನಡೆದ ಕಳೆದ 13 ಚುನಾವಣೆಗಳಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾದವರು ನಗರದ ಸಮಗ್ರ ಅಭಿವೃದ್ಧಿಗೆ ಯಾವುದೇ ಮಹತ್ವದ ಕೊಡುಗೆ ನೀಡಿಲ್ಲ. ಇಂಥ ಪಕ್ಷಗಳಿಗೆ ಪುನಾ ಮತ ನೀಡದಂತೆ ಸಿಪಿಐಎಂಎಲ್ ಅಭ್ಯರ್ಥಿ ವಿ.ಎಚ್.ಮಾಸ್ತರ್ ಮನವಿ ಮಾಡಿದರು.
ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಗರ ಕ್ಷೇತ್ರದಲ್ಲಿ 8 ಬಾರಿ ಆಯ್ಕೆಯಾ ಗಿರುವ ಕಾಂಗ್ರೆಸ್ ಭ್ರಷ್ಟಾಚಾರ ಬಿಟ್ಟು ಬೇರೆನನ್ನೂ ಮಾಡಿಲ್ಲ. ಕಾಂಗ್ರೆಸ್ನ ಹಿರಿಯ, ಕಿರಿಯ ನಾಯಕರೆಲ್ಲರೂ ಭ್ರಷ್ಟಾಚಾರದಲ್ಲಿಯೇ ಕಾಲಹರಣ ಮಾಡಿದ್ದಾರೆಂದು ಟೀಕಿಸಿದರು.
ಭ್ರಷ್ಟಾಚಾರ: ಕೇಂದ್ರದ ಕಾಂಗ್ರೆಸ್ ನಾಯಕರು ಬೋಫೋರ್ಸ್, ಅಂಗವಿಕಲರಿಗೆ ಮೀಸಲಿರಿಸಿದ ಅನುದಾನದ ದುರ್ಬಳಕೆಯಂಥ ಕಾರ್ಯಗಳಲ್ಲಿ ತೊಡಗಿ ಭ್ರಷ್ಟಾಚಾರ ಮಾಡಿದ್ದಾರೆ. ಅದೇ ರೀತಿ ಜೆಡಿಎಸ್ ಕೇವಲ ಕುಟುಂಬಕ್ಕೆ ಸೀಮಿತವಾಗಿದೆ. ನಗರ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ನೀಡಿಕೆಯಲ್ಲಿ ಅನುಸರಿಸಿದ ಪದ್ಧತಿಯಿಂದ ಆ ಪಕ್ಷದ ಉದ್ದೇಶ ಸ್ಪಷ್ಟವಾಗಿದೆ ಎಂದು ಆರೋಪಿಸಿದರು.
ಅಭಿವೃದ್ಧಿ ಎಲ್ಲಿ?: ಇನ್ನು ಬಿಜೆಪಿಯಲ್ಲಿರುವ ಬಹುತೇಕ ನಾಯಕರಿಗೆ ಅಕ್ರಮ ಎಸಗುವುದೇ ಉದ್ಯೋಗವಾಗಿದೆ. ಬಿಜೆಪಿಗೆ ಮತ ಹಾಕುವುದು ಆತ್ಮಾಹುತಿಗೆ ಸಮಾನ. ಭ್ರಷ್ಟಾಚಾರದ ವಿಚಾರದಲ್ಲಿ ಬಿಜೆಪಿ ಮತ್ತು ಕೆಜೆಪಿಗೆ ಹೆಚ್ಚು ವ್ಯತ್ಯಾಸವಿಲ್ಲ. ಅದೇ ರೀತಿ ಜೆಡಿಯು ಅಧಿಕಾರದಲ್ಲಿರುವ ಬಿಹಾರ್ ರಾಜ್ಯದಲ್ಲಿಯೇ 13 ಜಿಲ್ಲೆಗಳಲ್ಲಿ ಅಭಿವೃದ್ಧಿ ಕೈಗೊಂಡಿಲ್ಲ. ಅಂಥ ಪಕ್ಷದಿಂದ ನಗರ ಕ್ಷೇತ್ರದಲ್ಲಿ ನಿರೀಕ್ಷಿಸುವುದು ತಪ್ಪಾದೀತು ಎಂದು ಹೇಳಿದರು.
ಅದೇ ರೀತಿ ಬಿಎಸ್ಸಾರ್ ಕಾಂಗ್ರೆಸ್ ಪಕ್ಷವು ಶ್ರೀರಾಮುಲು ಹೊರತುಪಡಿಸಿ ಉಳಿದ ನಾಯಕರೇ ಇಲ್ಲ. ಶ್ರೀರಾಮುಲು ಅವರು 10 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ ಮಾಸ್ತರ್, ಕೆಜೆಪಿ ನಾಯಕ ಯಡಿಯೂರಪ್ಪ ಅವರು ರಾಜ್ಯದ ಸಿಎಂ ಆಗಿದ್ದಾಗ ಭಾರೀ ಪ್ರಮಾಣದ ಅಕ್ರಮ ಗಣಿಗಾರಿಕೆಯ ಹಣವು ಕೇಂದ್ರದ ಬಿಜೆಪಿ ನಾಯಕರಿಗೆ ತಲುಪಿದೆ ಎಂದು ಆರೋಪಿಸಿದರು.
ಜನ ಹಿತ ನಿರ್ಲಕ್ಷ್ಯ: ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಅಭಿವೃದ್ಧಿ ಕಡೆಗಣಿಸಿ ಕೇವಲ ಭ್ರಷ್ಟಾಚಾರ ಮಾಡುವುದರಲ್ಲಿಯೇ ನಿರತವಾಗಿದ್ದು, ಜನರ ಹಿತ ಮರೆತು ವರ್ತಿಸುತ್ತಿವೆ. ಮತ್ತೆ ಸದ್ಯದ ಚುನಾವಣೆಯಲ್ಲಿ ಮತದಾರರ ಬಳಿ ಮತ ಹಾಕುವಂತೆ ತೆರಳುತ್ತಿರುವುದು ದುರದೃಷ್ಟಕ ಸಂಗತಿ ಎಂದು ಹೇಳಿದರು.
ಸದ್ಯದ ಚುನಾವಣೆಯಲ್ಲಿ ಮತದಾರರು ಎಚ್ಚರಿಕೆಯಿಂದ ಮತದಾನ ಮಾಡುವ ಅವಶ್ಯಕತೆಯಿದೆ. ತಮಗೆ ಮತ ನೀಡಿದಲ್ಲಿ ಕ್ಷೇತ್ರದ ಸಮಗ್ರ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದ ಅವರು, ನಗರ ಕ್ಷೇತ್ರದಲ್ಲಿ ತಮ್ಮ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜು, ತಿಮ್ಮಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

