ಬಿಜೆಪಿ ಏಜೆಂಟರಂತೆ ವರ್ತನೆ: ಅಧಿಕಾರಿಗಳ ವಿರುದ್ಧ ಡಿಸಿಗೆ ದೂರು
ದೇವದುರ್ಗ: ತಾಲೂಕಿನ ಕೆಲ ಅಧಿಕಾರಿಗಳು ಶಾಸಕ ಕೆ. ಶಿವನಗೌಡ ನಾಯಕರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ.ಅಂಥವರ ವಿರುದ್ಧ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದ ಎ. ವೆಂಕಟೇಶ ನಾಯಕ ತಿಳಿಸಿದರು.
ಅವರು ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮದ ಹೊರತಾಗಿಯೂ ಕ್ಷೇತ್ರದಲ್ಲಿ ಅಧಿಕಾರಿಗಳೇ ಬಿಜೆಪಿ ಅಭ್ಯರ್ಥಿ ಪರ ಕಾರ್ಯನಿರ್ವಹಿಸುತ್ತಿರುವುದು ದುರದೃಷ್ಟಕರ ಸಂಗತಿ ಎಂದ ಅವರು ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕಿದೆ ಎಂದು ಆಗ್ರಹಿಸಿದರು.
ಕ್ಷೇತ್ರದಲ್ಲಿ ಮತದಾರರಿಗೆ ಮದ್ಯ ಹಂಚಲು ಸ್ವತಃ ಶಾಸಕರೇ ವಾಹನಗಳ ಮೂಲಕ ಮದ್ಯ ಸರಬರಾಜು ಮಾಡಿಸುತ್ತಿದ್ದಾರೆ. ಇಂಥ ಪ್ರಕರಣವನ್ನು ಕಾಂಗ್ರೆಸ್ ಮುಖಂಡ ಸಿದ್ದನಗೌಡ ಮೂಡಲಗುಂಡ ಹಾಗೂ ರಾಜಶೇಖರ ನಾಯಕ ಅವರು ಪತ್ತೆ ಮಾಡಿದ್ದಾರೆಂದು ದೂರಿದರು.
ಲಿಖಿತ ದೂರು: ಅಧಿಕಾರಿಗಳು ಅಧಿಕಾರರೂಢರ ಮಾತು ಕೇಳುವುದು ಸಹಜ. ಆದರೆ ಕ್ಷೇತ್ರದಲ್ಲಿನ ಅಧಿಕಾರಿಗಳು ವಿರೋಧ ಪಕ್ಷವನ್ನು ಸಂಪೂರ್ಣ ಕಡೆಗಣಿಸಿ, ಆಡಳಿತ ಪಕ್ಷದ ಪರವಾಗಿ ಮತ್ತು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆಂದು ಟೀಕಿಸಿದ ಅವರು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು. ಚುನಾವಣೆ ಅಕ್ರಮಕ್ಕೆ ಸಹಕಾರ ನೀಡುತ್ತಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು. ಇವರಿಂದ ನಿಷ್ಪಕ್ಷಪಾತ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಮುಖಂಡರಾದ ಎ. ಮಲ್ಲಿಕಾರ್ಜುನ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸ್ಸಯ್ಯ ಶಾಖೆ, ಭೀಮನಗೌಡ ನಾಗಡದಿನ್ನಿ, ಹುಸೇನಸಾಬ ನೀಲವಂಜಿ, ಅಮರಣ್ಣಗೌಡ ಗೌರಂಪೇಟ್, ಬಸವರಾಜ ಬಂಡೆಗುಡ್ಡ, ಶರಣಗೌಡ ಕಮತಗಿ, ಹನುಮರೆಡ್ಡೆಪ್ಪ ಮಿಯ್ಯಾಪೂರು, ಅಮರೇಶ ಬಲ್ಲಿದವ್, ಶಿವರಾಜ ಗೆಜ್ಜೆಭಾವಿ, ಅಮ್ಜದ್ ಅಲಿ, ಶಿವರಾಜಪ್ಪ ಕುಪ್ಪಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

