ಮಾದಿಗರಿಗೆ 'ಕೈ'ನಿಂದ ಅನ್ಯಾಯ: ಆರೋಪ
ದೇವದುರ್ಗ: ಜಿಲ್ಲೆಯಲ್ಲಿ ಮಾದಿಗರ ಬಹುಸಂಖ್ಯೆಯಲ್ಲಿದ್ದರೂ ಅವರಿಗೆ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದೇ ಅನ್ಯಾಯ ಮಾಡಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಆರೋಪಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಪ್ರಮುಖರು, ಪರಿಶಿಷ್ಟ ಜಾತಿಯಲ್ಲಿ ಸ್ಪೃಶ್ಯ ಜಾತಿಗಳಿಗೆ ರಾಜಕೀಯ ಅಧಿಕಾರ ಕೇಂದ್ರಿಕೃತವಾಗುತ್ತಿದೆ. ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳ ಸೇರ್ಪಡೆಯಿಂದ ನಿಜವಾದ ಅಸ್ಪೃಶ್ಯರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಜನಸಂಖ್ಯೆಯಾಧಾರಿತ ಮೀಸಲು ಅವಕಾಶ ಮಾಡಿಕೊಡದೇ ರಾಜಕೀಯ ಪಕ್ಷಗಳು ಪರಿಶಿಷ್ಟರ ಅಂತರಿಕ ಶೋಷಣೆ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಮಾದಿಗ, ಹೊಲೆಯರನ್ನು ಹೊರತುಪಡಿಸಿ ಇತರೆ ಸ್ಪೃಶ್ಯ, ಅಸ್ಪೃಶ್ಯರನ್ನು ಹೆಚ್ಚಿನ ಶಾಸಕರಾಗಿ ಆಯ್ಕೆಯಾಗಲು ಕಾರಣವಾಗಿದೆ ಎಂದು ಟೀಕಿಸಿದ್ದಾರೆ.
ಮೀಸಲಾತಿ ವರ್ಗೀಕರಣವು ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಬಗೆಹರಿಯದ ಸಮಸ್ಯೆಯಾಗಿ ಪರಿಣಮಿಸಿದೆ. ಕೇಂದ್ರ ಸರ್ಕಾರದ ಹಂತಕ್ಕೆ ಮುಟ್ಟಿರುವ ಒಳ ಮೀಸಲಾತಿ ಹೊರಾಟಕ್ಕೆ ಜಯ ಸಿಗಬೇಕಾದರೆ ಅನಿವಾರ್ಯವಾಗಿ ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಚುನಾವಣೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಂಬಲಿಸುತ್ತದೆ ಎಂದು ಜಿಲ್ಲಾ ಅಧ್ಯಕ್ಷ ತಿಮ್ಮಪ್ಪ ಗುಂಜಳ್ಳಿ, ಪ್ರಧಾನ ಕಾರ್ಯದರ್ಶಿ ಹನುಮಂತ ಮನ್ನಾಪುರಿ, ಶಿವರಾಯ ಅಕ್ಕರಕಿ, ಬಿ. ಪ್ರಭುದೇವ, ಮಂಜುನಾಥ ಕೊಪ್ಪರ, ಹನುಮಂತ, ಅಮತೆಪ್ಪ, ಸದಾಶಿವ ಯಮನಾಳ, ಮಲ್ಲೇಶ್ ಕೊಪ್ಪರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

