ರಾಯಚೂರು

ಕ್ಷೇತ್ರದ ಅಭಿವೃದ್ಧಿಗೆ ಜೆಡಿಎಸ್ ಬೆಂಬಲಿಸಿ

Published On :

ಹಂಚಿನಾಳ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ವೆಂಕಟರಾವ್ ನಾಡಗೌಡ ಮತಯಾಚನೆ


ಕನ್ನಡಪ್ರಭ ವಾರ್ತೆ   ಸಿಂಧನೂರು   ಏ.26
ಕ್ಷೇತ್ರವನ್ನು ಅಭಿವೃದ್ಧಿ ಮಾಡಿ ರಾಜ್ಯದಲ್ಲಿ ನಂ.1 ಸ್ಥಾನ ಪಡೆಯಬೇಕೆಂಬ ಮಾಹಾದಾಸೆ ಹೊಂದಿದ್ದು, ಸರ್ವಾಂಗೀಣ ಪ್ರಗತಿಗಾಗಿ ಜೆಡಿಎಸ್ ಬೆಂಬಲಿಸಿ ತಮಗೆ ಮತ ಹಾಕುವಂತೆ ಅಭ್ಯರ್ಥಿ ವೆಂಕಟರಾವ್ ನಾಡಗೌಡ ಮನೆ ಮನೆಗೆ ತೆರಳಿ ಅಬ್ಬರದ ಪ್ರಚಾರ ನಡೆಸಿದರು.
ಸಿಂಧನೂರು ಕ್ಷೇತ್ರದ ಹಂಚಿನಾಳ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ತಾವು ಶಾಸಕನಾಗುವ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ನೀವು ನನಗೆ ಕೊಟ್ಟ 5 ವರ್ಷದ ಅಧಿಕಾರವನ್ನು ಎಲ್ಲಿಯಾದರೂ ದುರುಪಯೋಗ ಮಾಡಿಕೊಂಡಿದ್ದರೆ ನನ್ನನ್ನು ಮೊದಲು ಮನೆಗೆ ಕಳಿಸಿ ಸರಿಯಾದ ಬುದ್ಧಿಕಲಿಸಿ. ಈ ಕ್ಷೇತ್ರ ಅಭಿವೃದ್ಧಿಗಾಗಿ ನಾನು ಶ್ರಮಿಸಿದ್ದೇನೆ. ಇಲ್ಲಿಯವರಿಗೆ ನೀವು ಅವಕಾಶ ನೀಡಿದವರಿಗಿಂತ ನಾನು ಉತ್ತಮ ಕೆಲಸ ಮಾಡಿದ್ದೇನೆ ಎನ್ನುವುದಾದರೆ ಮತ್ತೊಮ್ಮೆ ನಿಮ್ಮ ಸೇವೆಗೆ ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಮೂಲ ಸೌಕರ್ಯ ಕಲ್ಪಿಸಿದ ನೆಮ್ಮದಿ: ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ರಸ್ತೆ, ಕುಡಿವ ನೀರು ಸೇರಿದಂತೆ ಎಲ್ಲ ಮೂಲ ಸೌಕರ್ಯ ಒದಗಿಸಿದ ನೆಮ್ಮದಿಯಿದೆ. ಆದರೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಕಳೆದ 15 ವರ್ಷಗಳಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎನ್ನುವುದನ್ನು ಬಹಿರಂಗ ಪಡಿಸಲಿ. ಅವರ ಕಾಲದ ಎಲ್ಲ ಏತ ನೀರಾವರಿ ಯೋಜನೆಗಳನ್ನು ತಾವು ಬಂದು ಪೂರ್ಣಗೊಳಿಸಬೇಕಾಯಿತು ಎಂದರು.
ವಿರುಪಾಕ್ಷಿಗೌಡ ವಕೀಲರು ಮಾತನಾಡಿ, ನಾಡಗೌಡರು ಶಾಸಕನಾಗಿದ್ದ ಅವಧಿಯಲ್ಲಿ ರೈತ ಎರಡು ಬೆಳೆ ಬತ್ತ ಬೆಳೆಯಲು ತುಂಗಭದ್ರಾ ಜಲಾಶಯದಿಂದ ನೀರು ಬಿಡಿಸಿ, ಎರಡು ಬೆಳೆ ಬೆಳೆಯುವಂತೆ ಮಾಡಿದ್ದಾರೆ. ಸುಮಾರು 30 ವರ್ಷಗಳಲ್ಲಿ ಮಾಡಲು ಆಗದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿದ್ದಾರೆ. ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿವ ನೀರು, ರಸ್ತೆ, ಶಾಲೆಗಳು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕೊಟ್ಟಿದ್ದಾರೆ. ಕಾರಣ ಮೇ 5ರಂದು ನಡೆಯುವ ಚುನಾವಣೆಯಲ್ಲಿ ಮತದಾರ ಬಂಧುಗಳು ಜೆಡಿಎಸ್‌ಗೆ ಮತ ನೀಡಬೇಕೆಂದು ವಿನಂತಿಸಿದರು.
ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಅಯ್ಯನಗೌಡ ಆಯನೂರು, ಎಪಿಎಂಸಿ ನಿರ್ದೇಶಕ ಎಂ.ರಾಮರಾವ್, ಮುಖಂಡರಾದ ಧರ್ಮನಗೌಡ, ವಿರುಪಾಕ್ಷಗೌಡ ತುರಡಗಿ, ಡಿ. ಸತ್ಯನಾರಾಯಣ, ಎಂ. ನಾಗೇಶ ಹಂಚಿನಾಳ ಕ್ಯಾಂಪ್, ಆರ್. ಪಾಲಾಕ್ಷಗೌಡ ಗೊರೇಬಾಳ, ಜಿ. ಸತ್ಯನಾರಾಯಣ, ಗ್ರಾಪಂ ಅಧ್ಯಕ್ಷ ಎಸ್. ಕೃಷ್ಣಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.