ರಾಯಚೂರು

'ತತ್ವ ಸಿದ್ಧಾಂತಗಳ ಆಧಾರದಲ್ಲಿ ಪಕ್ಷ ಕಣಕ್ಕೆ'

Published On :

ರಾಯಚೂರು: ಮತ ಹಾಗೂ ಅಧಿಕಾರಕ್ಕೆ ಆಸೆ ಪಡದೆ ತತ್ವ- ಸಿದ್ಧಾಂತಗಳ ಆಧಾರದಲ್ಲಿ ಕಣಕ್ಕಿಳಿದಿರುವ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ಮಾಡುತ್ತಿರುವ ಎಸ್‌ಯುಸಿಐಸಿ ಪಕ್ಷದ ನಗರ ಕ್ಷೇತ್ರದ ಅಭ್ಯರ್ಥಿ ಅಪರ್ಣಾ ಅವರಿಗೆ ಮತ ನೀಡುವಂತೆ ಪಕ್ಷದ ಹಿರಿಯ ನಾಯಕ ರಾಧಾಕೃಷ್ಣ ಮನವಿ ಮಾಡಿದರು.
ನಗರದಲ್ಲಿ ಇತ್ತೀಚೆಗೆ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಸ್ಪಷ್ಟ ಬಹಮತ ಪಡೆಯದಿದ್ದರೂ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರದ ಕಾರ್ಯವೈಖರಿಯಿಂದ ಜನತೆ ಬೇಸತ್ತಿದ್ದಾರೆಂದು ಟೀಕಿಸಿದರು.
ಬಿಜೆಪಿ ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿದ್ದ ಎಲ್ಲರೂ ಕುಟುಂಬದವರ ಹೆಸರಿನಲ್ಲಿ ಸರ್ಕಾರಿ ಜಮೀನು ಕಬಳಿಕೆ ಸೇರಿ ಅನೇಕ ಹಗರಣಗಳಲ್ಲಿ ಸಿಲುಕಿ ಕಾರಾಗೃಹ ಕಂಡಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರ ಸಹ ಲಕ್ಷಾಂತರ ಕೋಟಿ ರು. ಅಕ್ರಮದಲ್ಲಿ ಶಾಮೀಲಾಗಿದ್ದು ಇಂಥ ಪಕ್ಷಗಳನ್ನು ಮತದಾರರು ಪ್ರಸಕ್ತ ಚುನಾವಣೆಯಲ್ಲಿ ತಿರಸ್ಕರಿಸುವಂತೆ ಮನವಿ ಮಾಡಿದರು.
ಅಭ್ಯರ್ಥಿ ಅಪರ್ಣಾ ಬಿ.ಆರ್., ಡಾ. ಸುನೀತ್‌ಕುಮಾರ್, ಎನ್.ಎಸ್. ವೀರೇಶ್ ಮತ್ತಿತರರು ಮಾತನಾಡಿದರು. ಇದಕ್ಕೂ ಮೊದಲು ನೇತಾಜಿ ವೃತ್ತದಿಂದ ಭಗತ್‌ಸಿಂಗ್ ಸರ್ಕಲ್‌ವರೆಗೆ ಎಸ್‌ಯುಸಿಐಸಿ ಪಕ್ಷದ ಅಭ್ಯರ್ಥಿ ಪರ ಪಾದಯಾತ್ರೆ ಮೂಲಕ ಮತ ಯಾಚಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.