ರಾಯಚೂರು

ಪಾಲಕರು ವೈದ್ಯರ ಸಲಹೆ ತಪ್ಪದೇ ಪಾಲಿಸಲಿ: ಕುಮಾರಸ್ವಾಮಿ

Published On :

ಸಿಂಧನೂರು: ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮಗುವಿನ ಪಾಲಕರು ತಪ್ಪದೆ ವೈದ್ಯರ ಸಲಹೆಗಳನ್ನು ಪಾಲಿಸಬೇಕು. ಜೊತೆಗೆ ಸರಿಯಾದ ಪ್ರಮಾಣದಲ್ಲಿ ಪೌಷ್ಟಿಕ ಆಹಾರವನ್ನು ಸಕಾಲದಲ್ಲಿ ಕೊಡಬೇಕು ಎಂದು ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.
ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗಳ ಅಡಿಯಲ್ಲಿ ಹಮ್ಮಿಕೊಂಡ ತಾಲೂಕ ಮಟ್ಟದ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ತಪಾಸಣೆ: ತಾಲೂಕು ಆರೋಗ್ಯ ಅಧಿಕಾರಿ ಡಾ. ಸೈಯದ್ ಹಸನ್ ಹುಸೇನಿ ಮಾತನಾಡಿ, ಕಳೆದೊಂದು ವರ್ಷದಿಂದ ಪ್ರತಿ ಎರಡು ತಿಂಗಳಿಗೊಮ್ಮೆ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈಗಾಗಲೇ ಎಲ್ಲಾ 584 ಅಂಗನವಾಡಿಗಳಲ್ಲಿ ಹಾಗೂ 11 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ವೈದ್ಯಾಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಮಕ್ಕಳ ತಜ್ಞರಿಂದ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಮಕ್ಕಳನ್ನು ಬಾಲಸಂಜೀವಿನಿ ಯೋಜನೆಯಡಿಯಲ್ಲಿ ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸಲಾಗುವುದು ಎಂದರು.
ವಿವಿಧ ಆಹಾರ ಪದಾರ್ಥ: ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹನುಮಂತಪ್ಪ ಓಲೇಕಾರ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಶಿಶುವಿಗೆ ಪ್ರತಿ ದಿನ ಮೊಟ್ಟೆ ಹಾಗೂ ಅಕ್ಕಿ, ಗೋದಿ, ತೊಗರಿಬೇಳೆ, ಹೆಸರುಕಾಳು, ಬೆಲ್ಲಗಳಿಂದ ತಯಾರಿಸಿದ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಿ ಕೊಡಲಾಗುತ್ತಿದೆ. ಕೇಂದ್ರಗಳಿಗೆ ಮಕ್ಕಳನ್ನು ತಪ್ಪದೆ ಕಳುಹಿಸಲು ವಿನಂತಿಸಿದರು.
ಈ ಸಂದರ್ಭದಲ್ಲಿ ನವೋದಯ ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞ ಡಾ ಗಿರಿಧರ ದೇವರು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ ಕರವೀರಪ್ರಭು ಕ್ಯಾಲಕೊಂಡ, ಡಾ ರಮ್ಯ, ದೀಪಿಕಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಹಾಗೂ ಬಿ.ಪಿ.ಎಮ್.ದೀಪಕ್ ಗಾಡವಿ, ಹಿ.ಆ.ಸ. ಪಿ. ವೆಂಕಟೇಶ, ಎ.ಐ. ಪಾಟೀಲ್, ವಿಮಲಾಕ್ಷಿ, ಕಮಲಾ, ಗಂಗಮ್ಮ, ಐಸಿಡಿಎಸ್ ಮಹಾದೇವಿ, ಜಯಲಲಿತಾ ಕಾತ್ಯಾಯನಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.