ರಾಯಚೂರು

ಕರವೇ ಗ್ರಾಮ ಘಟಕ ಉದ್ಘಾಟನೆ

Published On :

ರಾಯಚೂರು: ತಾಲೂಕಿನ ದೇವನಪಲ್ಲಿ ಗ್ರಾಮದಲ್ಲಿ ಈಚೆಗೆ ಕರ್ನಾಟಕ ರಕ್ಷಣಾ ವೇದಿಕೆ ಯ ಗ್ರಾಮ ಘಟಕದ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿತ್ತು. ಕರವೇ ಸಂಘಟನೆ ಜಿಲ್ಲಾಧ್ಯಕ್ಷ ವಿನೋದರೆಡ್ಡಿ ಗ್ರಾಮ ಘಟಕ ಉದ್ಘಾಟಿಸಿ, ಗಡಿಭಾಗದಲ್ಲಿರುವ ಎಲ್ಲ ಗ್ರಾಮಸ್ಥರು ಕನ್ನಡ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡ ನಾಡಿನ ಪ್ರಗತಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವಂಥವರಿಗೆ ಮೇ 5ರಂದು ನಡೆಯುವ ಚುನಾವಣೆಯಲ್ಲಿ ಮತ ಹಾಕುವಂತೆ ಮನವಿ ಮಾಡಿದರು. ಸಮಾರಂಭದಲ್ಲಿ ಮುಖಂಡರಾದ ಗೋವಿಂದು ಮಲ್ಕಾಪೂರ, ಶಿವನಗೌಡ ದೇವನಪಲ್ಲಿ, ಸತ್ಯಪ್ಪ, ತಾಯಪ್ಪ ನಾಯಕ, ಹನುಮಯ್ಯ ಮಲ್ಕಾಪೂರ, ಗ್ರಾಮ ಘಟಕದ ಕರವೇ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
'ದೀನ ದಲಿತರ ಧ್ವನಿ ಡಾ. ಅಂಬೇಡ್ಕರ್‌'
ಸಿಂಧನೂರು: ಡಾ.ಬಿ.ಆರ್. ಅಂಬೇಡ್ಕರ್ ದೀನ-ದಲಿತರ ಧ್ವನಿಯಾಗಿದ್ದರು. ಅವರು ಸರ್ವರಿಗೂ ಸಮಬಾಳು, ಸಮಪಾಲು ನೀಡಲು ಸಂವಿಧಾನ ಬರೆದರು ಎಂದು ಪತ್ರಕರ್ತ ಸಿ.ಎಚ್. ನಾರಿನಾಳ ಹೇಳಿದರು. ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಸಮಾಜದಲ್ಲಿ ಎಲ್ಲರೂ ಸಮಾನತೆಯಿಂದ ಮುನ್ನಡೆದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ಡಿಎಸ್‌ಎಸ್ ತಾಲೂಕು ಸಂಚಾಲಕ ಶರಣಪ್ಪ ಹಂಚಿನಾಳ ಕೆ., ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ಗಾಂಧಿನಗರ, ನಾಗಪ್ಪ ತುರುವಿಹಾಳ, ಅಶೋಕ, ಫಕೀರಪ್ಪ ಎಂ., ಮರಿಯಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.