ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ
ರಾಯಚೂರು: ನಗರದ ವಿವಿಧ ಬಡಾವಣೆಗಳಲ್ಲಿ ಇತ್ತೀಚೆಗೆ ಮಾಜಿ ಶಾಸಕ ಪಾಪಾರೆಡ್ಡಿ ಅವರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಯಾಸೀನ್ ಪರ ಪ್ರಚಾರ ನಡೆಸಿದರು. ಇಲ್ಲಿನ ಮಡ್ಡಿಪೇಟೆ, ಮಕ್ತಲ್ಪೇಟೆ ಮತ್ತಿತರೆ ಬಡಾವಣೆಗಳಲ್ಲಿನ ಮನೆ ಮನೆಗಳಿಗೆ ತೆರಳಿದ ಅವರು, ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿ ಮಾತನಾಡಿ, ಜಿಲ್ಲಾದ್ಯಂತ ಕಾಂಗ್ರೆಸ್ ಅಲೆಯಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ವ ಜಾತಿ, ಜನಾಂಗದವರನ್ನು ಗೌರವದಿಂದ ಕಾಣುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರದ ಜನತೆಗೆ ವಿವಿಧ ಮೂಲ ಸೌಲಭ್ಯ ಕಲ್ಪಿಸುವ ಕಾರ್ಯ ಮಾಡಿರುವ ಅವರಿಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಪಕ್ಷದ ಪ್ರಮುಖರಾದ ವೀರೇಶ್, ಶ್ರೀನಿವಾಸರೆಡ್ಡಿ, ಟಿ. ಮಲ್ಲೇಶ್, ಜಿ. ಶೇಖರ್ ರೆಡ್ಡಿ, ಲಿಂಗಾರೆಡ್ಡಿ, ನಿಂಬೇಕಾಯಿ ಭೀಮರೆಡ್ಡಿ, ಲಾಲಪ್ಪ ಸೇರಿದಂತೆ ಅವರ ಬೆಂಬಲಿಗರು ಹಾಗೂ ಮುನ್ನೂರು ಕಾಪು ಸಮಾಜದವರು ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

