ಪ್ರಚಾರಕ್ಕೆ ಮಕ್ಕಳ ಬಳಕೆ; ದೂರು
ರಾಯಚೂರು: ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿದ ಮಾನವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಯ್ಯಮ್ಮ ನಾಯಕ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಮಾನವಿ ತಾಲೂಕಿನ ನಾರಬಂಡಾ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಯ್ಯಮ್ಮ ನಾಯಕ ಅವರು ಮಕ್ಕಳನ್ನು ಪಕ್ಷದ ಪ್ರಚಾರಕ್ಕೆ ಬಳಸಿಕೊಂಡಿರುವ ಬಗ್ಗೆ ಚುನಾವಣಾಧಿಕಾರಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿರವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಖಲೆಗಳಿಲ್ಲದ ನಗದು ಜಪ್ತಿ
ರಾಯಚೂರು: ಸಿಂಧನೂರು ತಾಲೂಕಿನ ಉಮಲೂಟಿಯ ಚೆಕ್ ಪೋಸ್ಟ್ ಬಳಿ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ 3.50 ಲಕ್ಷ ನಗದು, ಕಾರು ಹಾಗೂ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಸುರೇಂದ್ರ ಕುಮಾರ್ ಹಾಗೂ ಸೈಯದ್ ಶಾಕೀರ್ ಎಂಬುವವರು ಹೈದರಾಬಾದ್ ನಿಂದ ಕಾರಿನಲ್ಲಿ ದಾಖಲೆಗಳಿಲ್ಲದೇ 3.50 ಲಕ್ಷ ಸಾಗಿಸುತ್ತಿದ್ದ ವೇಳೆ ತಡೆದ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ತಪಾಸಣೆ ನಡೆಸಿದಾಗ ಈ ಹಣ ಪತ್ತೆಯಾಗಿದೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೇಂದಿ ಮಾರಾಟ; ಮಹಿಳೆ ಬಂಧನ
ರಾಯಚೂರು: ಇಲ್ಲಿನ ಅಶೋಕ ನಗರದಲ್ಲಿ ಸೇಂದಿ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಬಂಧಿತಳನ್ನು ತಾಯಮ್ಮ ಎಂದು ಗುರುತಿಸಲಾಗಿದೆ. ಈಕೆ ಮನೆ ಮುಂದೆ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಚುನಾವಣೆಯ ಸಂಚಾರಿ ದಳದ ಸಿಬ್ಬಂದಿ ಆಕೆಯಿಂದ 40 ಲೀಟರ್ ಸೇಂದಿ ಜಪ್ತಿ ಮಾಡಿದ್ದಾರೆ. ಈ ಕುರಿತು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ; ಒಬ್ಬನ ಸೆರೆ
ರಾಯಚೂರು: ಮಾನವಿ ತಾಲೂಕಿನ ಅಮರೇಶ್ವರ ಕ್ಯಾಂಪಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಸೋಮಣ್ಣ ಎಂದು ಗುರುತಿಸಲಾಗಿದೆ. ಈತ ಅಕ್ರಮವಾಗಿ ವಿವಿಧ ಕಂಪನಿಗಳ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಚುನಾವಣಾಧಿಕಾರಿಗಳು ಆರೋಪಿಯನ್ನು ಬಂಧಿಸಿ ಅವನಿಂದ, 10,485 ಬೆಲೆ ಬಾಳುವ ಮದ್ಯ ಜಪ್ತಿ ಮಾಡಲಾಗಿದೆ. ಈ ಕುರಿತು ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

