ರಾಯಚೂರು

ಜೆಡಿಎಸ್‌ಗೆ ಸ್ಪಷ್ಟ ಬಹುಮತ: ಸಿಮೆಯೋನ್

Published On :

ರಾಜ್ಯದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಜೆಡಿಎಸ್‌ಗೆ ದೂರದೃಷ್ಟಿ
ರಾಯಚೂರು: ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆಯಿದ್ದು, ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಜೆಡಿಎಸ್ ನಾಯಕ ಡೇವಿಡ್ ಸಿಮೆಯೋನ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಅನೇಕ ತಿಂಗಳಿನಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬಲವರ್ಧನೆ ಕೈಗೊಳ್ಳಲಾಗಿದೆ. ಪಕ್ಷ ಬಲಿಷ್ಠವಾಗಿದ್ದು, ಚುನಾವಣೆಯಲ್ಲಿ ಗೆಲವು ನಿಶ್ಚಿತ ಎಂದು ಹೇಳಿದರು.
ಜೆಡಿಎಸ್‌ಗೆ ದೂರದೃಷ್ಟಿ: ಜಾತ್ಯತೀತ ತತ್ವದಡಿ ಕಾರ್ಯನಿರ್ವಹಿಸುವ ಜೆಡಿಎಸ್ ಸಿದ್ಧಾಂತ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಎಲ್ಲ ಜಾತಿ, ಜನಾಂಗದವರ ಏಳಿಗೆಗೆ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್ ಸರ್ಕಾರ ಕ್ರಮ ಕೈಗೊಂಡಿತ್ತು. ರಾಜ್ಯದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಜೆಡಿಎಸ್ ದೂರದೃಷ್ಟಿಯಿರಿಸಿಕೊಂಡಿದೆ ಎಂದು ಹೇಳಿದರು.
ಜೆಡಿಎಸ್ ಮತದಾರರಿಗೆ ತನ್ನ ಸರ್ಕಾರದ ಅವಧಿಯಲ್ಲಿ ಪ್ರಣಾಳಿಕೆಯ ಮೂಲಕ ನೀಡಿದ್ದ ಭರವಸೆಗಳ ಪೈಕಿ ಶೇ.70ರಿಂದ 80ರಷ್ಟು ಭರವಸೆಗಳನ್ನು ಈಡೇರಿಸಿದೆ. ಆದರೆ ಇನ್ನುಳಿದ ರಾಜಕೀಯ ಪಕ್ಷಗಳ ಸರ್ಕಾರಗಳು ಪ್ರಣಾಳಿಕೆಯಲ್ಲಿ ಘೋಷಿಸಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ಅಭಿವೃದ್ಧಿಗೆ ಹಿನ್ನಡೆ: ಜೆಡಿಎಸ್ ಪ್ರಸಕ್ತ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆ ಒಳಒಪ್ಪಂದ ಮಾಡಿಕೊಂಡಿಲ್ಲ. ದೇವದುರ್ಗದಲ್ಲಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ತಟಸ್ಥವಾಗಿ ಉಳಿಯಲು ನಿರ್ಧರಿಸಿದೆ. ಇದರ ಹಿಂದೆ ಯಾವುದೇ ಉದ್ದೇಶವಿಲ್ಲ. ಪಕ್ಷವು ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದೆ. ಹೀಗಾಗಿ ಕಡೆಗಣನೆ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಾಮರ್ಥ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಚುನಾವಣೆ ವೇಳೆ ಅಕ್ರಮಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಅವಕಾಶ ಮಾಡಿಕೊಟ್ಟಿದ್ದು, ಅದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿದೆ. ವಿವಿಧ ಆಸೆ, ಆಮಿಷಗಳನ್ನೊಡ್ಡುವ ಮೂಲಕ ಮತ ಪಡೆದು ನಂತರ ಮತದಾರರನ್ನು ಕಡೆಗಣಿಸುವ ಪದ್ಧತಿ ಅನುಸರಿಸಲಾಗುತ್ತಿದೆ. ಇದರಿಂದ ಅಭಿವೃದ್ಧಿಗೂ ಹಿನ್ನಡೆಯಾಗುತ್ತಿದೆ ಎಂದು ಟೀಕಿಸಿದರು.
ರೈತರ ಪರ ನಿಲುವು: ರೈತರ ಪರ ನಿಲುವು ಇರಿಸಿಕೊಂಡಿರುವ ಜೆಡಿಎಸ್ ಸಮಾಜದ ಎಲ್ಲ ವರ್ಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುವ ಭರವಸೆ ನೀಡಿದೆ. ಕಳೆದ ಬಾರಿ ತನ್ನ ಅಧಿಕಾರವಧಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ರಾಜ್ಯವನ್ನು ಪ್ರಗತಿ ಪಥದತ್ತ ಕೊಂಡೊಯ್ದಿದ್ದು, ಅವರು ಜಾರಿಗೆ ತಂದ ಯೋಜನೆಗಳನ್ನು ಜನತೆ ಮೆಚ್ಚಿದ್ದಾರೆ. ಅದೇ ಹಿನ್ನೆಲೆಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್ ಪರ ಭಾರಿ ಪ್ರಮಾಣದಲ್ಲಿ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಪಕ್ಷದ ರಾಯಚೂರು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಯುಸೂಫ್ ಖಾನ್, ಶಿವಶಂಕರ್, ದಾನಪ್ಪ ಯಾದವ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.