ರಾಯಚೂರು

ಮುರಾರಿ ರೋಡ್ ಶೋ

Published On :

ಮುದಗಲ್: ಲಿಂಗಸ್ಗೂರು ವಿಧಾನಸಭೆ ಮೀಸಲು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಚ್.ಬಿ. ಮುರಾರಿ ಇಂದು ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು.
ಪಟ್ಟಣದ ಲಿಂಗಸ್ಗೂರು ರಸ್ತೆಗೆ ಹೊಂದಿಕೊಂಡಿರುವ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಪಟ್ಟಣದ ಜಾಡರಪೇಟೆ, ರಾಯಚೂರು ಬೆಳಗಾಂವ ರಾಜ್ಯ ಹೆದ್ದಾರಿ, ಬಜಾರ ರಸ್ತೆ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ತೆರಳಿ ರೋಡ್ ಶೋ ಮೂಲಕ ಮತಯಾಚಿಸಿದರು. ರೋಡ್ ಶೋ ಮತಯಾಚನೆಯಲ್ಲಿ ಪಪಂ ಮಾಜಿ ಅಧ್ಯಕ್ಷ ಗುಂಡಪ್ಪ ಜೀಡಿ, ದಲಿತ ಮುಖಂಡರಾದ ವೆಂಕಟೇಶ ಹಿರೇಮನಿ, ಮಲ್ಲಪ್ಪ ಕನ್ನಾಪುರಹಟ್ಟಿ, ಅನ್ನಿಸಬಾಬು ಕಲಂದರಿಯಾ, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.