ಬಿಜೆಪಿ- ಜೆಡಿಎಸ್ ಮೈತ್ರಿ ಉತ್ತಮ ಬೆಳವಣಿಗೆ: ನಾಯಕ
ರಾಜ್ಯದಲ್ಲಿ ಕಾಂಗ್ರೆಸ್ ಹಣಿಯಲು ಪ್ರಾದೇಶಿಕ ಪಕ್ಷಗಳ ಒಗ್ಗಟ್ಟಿನ ಹೋರಾಟ ಸ್ವಾಗತಾರ್ಹ
ಕನ್ನಡಪ್ರಭ ವಾರ್ತೆ ಮುದಗಲ್ಣ್ ಆ.1
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಣಿಯಲು ರಾಜ್ಯದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಶಿವನಗೌಡ ನಾಯಕ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡುವ ಮೂಲಕ ಪ್ರಪಂಚವೇ ಇತ್ತ ತಿರುಗಿ ನೋಡುವಂತೆ ಮಾಡಿದ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬಾರದು ಎಂದು ರಾಜ್ಯದಲ್ಲಿರುವ ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದು ಸ್ವಾಗತಾರ್ಹ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮತ್ತೆ ಬಿಜೆಪಿಗೆ ಕರೆತರಲು ಸಕಲ ಸಿದ್ಧತೆ ನಡೆದಿದೆ. ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದರು.
ಸೋಲು- ಗೆಲವು ಮುಖ್ಯವಲ್ಲ: ತಾವು ದೇವದುರ್ಗ ಶಾಸಕರಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದರೂ ಜನ ತಿರಸ್ಕಾರ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲು- ಗೆಲವು ಮುಖ್ಯ ಅಲ್ಲ. ಈಗಿನ ಶಾಸಕರು ಅಂದಿನ ಸಂಸದರಾಗಿದ್ದ ವೆಂಕಟೇಶ ನಾಯಕರು ಕೇಂದ್ರ ಸರ್ಕಾರದಿಂದ ಒಂದೂ ಕೆಲಸವನ್ನು ಮಾಡಿಸಿಲ್ಲ ಎಂದರು. ದೇವದುರ್ಗ ಮಾದರಿ ತಾಲೂಕು ಮಾಡಿದ್ದೇನೆ ಎನ್ನುವ ಹೆಮ್ಮೆ ನನಗಿದೆ ಎಂದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಯಚೂರು ಲೋಕಸಭೆ ಚುನಾವಣೆಯಿಂದ ಕಣಕ್ಕೆ ಇಳಿಯಲು ತಯಾರಿ ನಡೆಸಿದ್ದೇನೆ. ಆದ್ದರಿಂದ ಲೋಕಸಭಾ ಕ್ಷೇತ್ರದ 200 ಹಳ್ಳಿಗಳಿಗೆ ಈಗಾಗಲೇ ಭೇಟಿ ನೀಡಿ, ಜನಾಭಿಪ್ರಾಯ ಸಂಗ್ರಹ ಮಾಡುತ್ತಿದ್ದೇನೆ. ಜನ ಇಚ್ಛಿಸಿದರೆ ರಾಯಚೂರು ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಸಿದ್ಧರಿರುವುದಾಗಿ ಹೇಳಿದರು.
ಕಾಂಗ್ರೆಸ್ ದುರುದ್ದೇಶ: ಕಾಂಗ್ರೆಸ್ ಸರ್ಕಾರವು ಹೊಸ ತಾಲೂಕುಗಳ ರಚನೆ ರದ್ದುಪಡಿಸಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ. ಮುದಗಲ್ ತಾಲೂಕು ರಚನೆ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪಡಿತರ ವ್ಯವಸ್ಥೆಯನ್ನು ಹಾಳು ಮಾಡಿದೆ. ಜಿಲ್ಲೆಯಲ್ಲೇ 32 ಸಾವಿರ ಕಾರ್ಡುಗಳನ್ನು ರದ್ದು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುದಗಲ್ ಬಿಜೆಪಿ ಅಧ್ಯಕ್ಷ ಮುಬಿನಸಾಬ್, ಮುಖಂಡರಾದ ಟಿ.ಶೇಷಣ್ಣ, ಸಿದ್ದಯ್ಯಸ್ವಾಮಿ, ಗುರುಬಸಪ್ಪ ಸಜ್ಜನ್, ರಾಘು ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಪಕ್ಷದ ಮುದಗಲ್ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

